Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ
    ಅಪರಾಧ

    ಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ

    vartha chakraBy vartha chakraSeptember 5, 2022Updated:September 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಸೆ.5- ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿಗಳು ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ.
    ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್​ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
    ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ ಮನ ನೊಂದು ನೇಣಿಗೆ ಶರಣಾಗಿದ್ದಾರೆ.
    ಕೆಲವು ಸ್ವಾಮೀಜಿಗಳ ಲೈಂಗಿಕ ಹಗರಣದ ಕುರಿತು ಓರ್ವ ಮಹಿಳೆ ಆಡಿಯೊದಲ್ಲಿ ಹೆಸರು ಸಹಿತ ಪ್ರಸ್ತಾಪ ಮಾಡಿದ್ದಾರೆ. ಆಡಿಯೊದಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ. ಅವರ ಪೈಕಿ ಓರ್ವ ಮಹಿಳೆ ಕೆಲವೊಂದು ಪ್ರಶ್ನೆಗಳನ್ನು ಇನ್ನೊಂದು ಮಹಿಳೆಗೆ ಕೇಳಿದ್ದಾರೆ. ಬೆಳಗಾವಿಯ ಮಠದಲ್ಲಿಯೇ ಅನೇಕ ವರ್ಷಗಳಿಂದ ತಾವು ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಇನ್ನೊಂದು ಮಹಿಳೆ ಮಠಗಳಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ದೌರ್ಜನ್ಯಗಳ ಕುರಿತು ವಿವರಣೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಲವೊಂದು ಮಠಗಳು ಹಾಗೂ ಕೆಲವು ಸ್ವಾಮೀಜಿಗಳ ಹೆಸರನ್ನೂ ಆಕೆ ಆಡಿಯೋದಲ್ಲಿ ಹೇಳಿದ್ದಾರೆ. ಆ ಆಡಿಯೊದಲ್ಲಿ ನೇಗಿನಹಾಳ ಸ್ವಾಮೀಜಿ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮನನೊಂದುಕೊಂಡು ಇಂಥದ್ದೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
    ವೈರಲ್​ ಆಡಿಯೋ ಕುರಿತು ಸೂಕ್ತ ತನಿಖೆ ನಡೆಸುವಂತೆ, ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೈಲಹೊಂಗಲ ಡಿವೈಎಸ್​ಪಿ ಅವರಿಗೆ ಮಠದ ಆಡಳಿತ ಮಂಡಳಿ ದೂರು ನೀಡಿದೆ. ಲಿಂಗಾಯತ ಧರ್ಮದ ಮಠಾಧೀಶರನ್ನ ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
    ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಠಾಧೀಶರ ಚಾರಿತ್ರ್ಯಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಲಿಂಗಾಯತ ಧರ್ಮದವರಿಗೆ ಮುಜುಗರ ಮಾಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.
    ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    ಕಾನೂನು ಧರ್ಮ ಧಾರ್ಮಿಕ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಕ್ತಿ ಪ್ರದರ್ಶನ
    Next Article ಹಬ್ಬದ ರಜೆಗೆ ಬಂದಿದ್ದ ಯುವಕನ ಕೊಲೆ
    vartha chakra
    • Website

    Related Posts

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    February 26, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    February 26, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Rfbbvq on ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    • Diegotup on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.