Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka
    ಸುದ್ದಿ

    ಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka

    vartha chakraBy vartha chakraNovember 6, 2023Updated:November 6, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.6-ಕಳೆದ ಜುಲೈ ತಿಂಗಳಲ್ಲಿ ಪುಣೆ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಬಂಧಿಸಿದ್ದ 7 ಮಂದಿ ಶಂಕಿತ ಐಸಿಸ್ ಉಗ್ರರು ವಿಚಾರಣೆ ವೇಳೆ  ಕರ್ನಾಟಕದಲ್ಲೂ ಭಾರಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿ‌ ತರಬೇತಿ ಕೂಡ ನೀಡಿದ್ದ ಸ್ಫೋಟಕ ಸಂಗತಿ ಬೆಳಕಿಗೆ ಬಂದಿದೆ.

    ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದನಾ ದಾಳಿ ನಡೆಸುವ ಸಂಚಿನಲ್ಲಿ ಭಾಗಿಯಾಗಿರುವ ಶಂಕೆ ಮೇಲೆ  ಕಳೆದ ಜುಲೈನಲ್ಲಿ ಪುಣೆ ಬಳಿ 7 ಮಂದಿ ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸಿರುವ ಎನ್ಐಎ ಅಧಿಕಾರಿಗಳು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

    ಈ ವೇಳೆ, ಬಂಧಿತ ಶಂಕಿತ ಉಗ್ರರು ಕರ್ನಾಟಕದಲ್ಲೂ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವುದನ್ನು ಬಾಯ್ಬಿಟ್ಟಿರುವುದನ್ನು ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

    ಮಧ್ಯಪ್ರದೇಶದ ರತ್ಲಾಮ್ನ ಮೊಹಮ್ಮದ್ ಇಮ್ರಾನ್, ಮೊಹಮ್ಮದ್‌ ಯೂಸುಫ್ ಖಾನ್ ಅಲಿಯಾಸ್ ಮಟ್ಕಾ ಅಲಿಯಾಸ್ ಅಮೀರ್ ಅಬ್ದುಲ್ ಹಮೀದ್ ಖಾನ್, ಮೊಹಮ್ಮದ್ ಯೂನಸ್, ಮೊಹಮ್ಮದ್‌ ಯಾಕೂಬ್ ಸಾಕಿ ಅಲಿಯಾಸ್ ಆದಿಲ್ ಅಲಿಯಾಸ್ ಆದಿಲ್ ಸಲೀಂ ಖಾನ್, ಮಹಾರಾಷ್ಟ್ರದ ಪುಣೆಯ ಕೊಂಡ್ವಾದ ಕದೀರ್ ದಸ್ತಗೀರ್ ಪಠಾಣ್ ಅಲಿಯಾಸ್ ಅಬ್ದುಲ್ ಕದೀರ್ ಮತ್ತು ಸೀಮಾಬ್ ನಾಸಿರುದ್ದೀನ್ ಕಾಜಿ, ಮಹಾರಾಷ್ಟ್ರ ದ ಥಾಣೆಯಲ್ಲಿರುವ ಪಾದ್ಘಾದ ಜುಲ್ಫಿಕರ್ ಅಲಿ ಬರೋಡಾವಾಲಾ ಅಲಿಯಾಸ್ ಲಾಲಾಭಾಯಿ ಅಲಿಯಾಸ್ ಸೈಫ್, ಶಾಮಿಲ್ ಸಾಕಿಬ್ ನಾಚನ್ ಮತ್ತು ಆಕಿಫ್ ಅತೀಕ್ ನಾಚನ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.

     

    ಬಂಧಿತ ಶಂಕಿತ ಉಗ್ರರು ಸ್ಫೋಟಕ್ಕೂ ಸ್ಥಳ ಗುರುತು ಮಾಡಿದ್ದರು ಎನ್ನಲಾಗಿದೆ. ಹಲವು ರಾಜ್ಯಗಳಲ್ಲಿ ಸ್ಪೋಟಕ್ಕೆ ಸಂಚು ಹೂಡಲಾಗಿತ್ತು. ಕರ್ನಾಟಕದ ವಿವಿಧ ಜಾಗಗಳ ಜೊತೆಗೆ ಮಹಾರಾಷ್ಟ್ರ, ಗೋವಾ, ತೆಲಂಗಾಣ ಹಾಗೂ ಇತರೆಡೆ ಸ್ಫೋಟಕ್ಕೆ ಸ್ಥಳ ಗುರುತಿಸಿದ್ದರು.

    ಫ್ಯಾಬ್ರಿಕೇಟೆಡ್ ಐಇಡಿ ಪ್ಲಾಂಟ್‌ ಮಾಡಿ ಸ್ಪೋಟಕ್ಕೆ ಸಂಚು ರೂಪಿಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಭಾವಿ ಉಗ್ರರಿಗೆ ತರಬೇತಿಯನ್ನೂ ಇವರು ಆಯೋಜಿಸಿದ್ದರು. ಆರೋಪಿಗಳು ಐಸಿಸ್ ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಹಣವನ್ನು ಸಂಗ್ರಹಿಸಲು ಕೆಲಸ ಮಾಡುತ್ತಿದ್ದರು.

    ಈ ಆರೋಪಿಗಳು ಭಯೋತ್ಪಾದಕ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದರು. ಇನ್ನೂ ಕೆಲ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು ಮತ್ತು ಸುಧಾರಿತ ಸ್ಫೋಟಕ ಸಾಧನಗಳ (ಐಇಡಿ) ತಯಾರಿಕೆಗೆ ಪೂರ್ವಸಿದ್ಧತಾ ತರಬೇತಿ ನಡೆಸಿದ್ದರು ಎನ್ನಲಾಗಿದೆ.

    ಶಂಕಿತ ಉಗ್ರರು ಸ್ಫೋಟದ ಬಳಿಕ ತಾವು ತಪ್ಪಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆಯೂ ಮಾಸ್ಟರ್ ಪ್ಲಾನ್‌ ಮಾಡಿದ್ದರು. ಸ್ಫೋಟದ ಬಳಿಕ ದೂರದ ಹಾಗೂ ದಟ್ಟವಾದ ಕಾಡುಗಳಲ್ಲಿ ಅಡಗಿಕೊಳ್ಳುವ ಬಗ್ಗೆ ಪ್ಲಾನ್‌ ಮಾಡಿದ್ದರು. ಅಲ್ಲದೇ ಓಡಿಹೋಗುವಾಗ ಸೂಕ್ತವಾದ ಕ್ಯಾಂಪಿಂಗ್ ಸ್ಥಳಗಳನ್ನು ಪತ್ತೆ ಹಚ್ಚಲು ವಿಚಕ್ಷಣಕ್ಕಾಗಿ ಡ್ರೋನ್‌ಗಳನ್ನು ಬಳಸಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಉಗ್ರರ ತನಿಖೆ ನಡೆಸಿರುವ ಎನ್ಐಎ ಅಧಿಕಾರಿಗಳು, ಮುಂಬೈಯ ಎನ್‌ಐಎ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ

    Verbattle
    Verbattle
    Verbattle
    Government Karnataka News Trending ಇಡಿ ಉಗ್ರ ಪಠಾಣ್
    Share. Facebook Twitter Pinterest LinkedIn Tumblr Email WhatsApp
    Previous Articleಕೆಲಸದಿಂದ ತೆಗೆದದ್ದಕ್ಕೆ ನಡೆಯಿತು ಕೊಲೆ | Pratima
    Next Article ಕೃಷಿ ಪಂಪ್ ಸೆಟ್ ಗಳಿಗೆ 7ಗಂಟೆ ವಿದ್ಯುತ್ ಪೂರೈಕೆ | Agriculture Pumpset
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    1 Comment

    1. Viajhn on February 13, 2026 7:23 am

      mgm betting site online casino betmgm play mgm gambling

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on The Essence Of Gandhi Jayanthi | Gandhi Jayanthi 2023
    • LinwoodGah on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • LinwoodGah on ಯಾರೇ.. ಕೂಗಾಡಲಿ…
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.