ನಾಗ್ಪುರ/ನವದೆಹಲಿ: ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ Businessಿಯೊಬ್ಬರನ್ನು ಹತ್ಯೆ ಮಾಡಲಾಗಿದೆ.
ಈ ಹತ್ಯೆಗೆ ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿರುವುದು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಜೂನ್ 21ರಂದು ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ (54) ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಐವರನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ (54) ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದೆ. ಹತ್ಯೆ ಹಿಂದೆ ಅಂತರರಾಷ್ಟ್ರೀಯ ಸಂಘಟನೆಗಳ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಗೃಹ ಸಚಿವರ ಕಾರ್ಯಾಲಯ ಟ್ವೀಟ್ ಮಾಡಿದೆ.
ನೂಪುರ್ ಶರ್ಮಾ ಪರ ಪೋಸ್ಟ್ ಮಾಡಿದ್ದ ಔಷಧ ವ್ಯಾಪಾರಿ ಹತ್ಯೆ, NIAಗೆ ತನಿಖೆ ಹೊಣೆ
Previous Articleನಾಲ್ವರು ಯುವಕರು ಅತ್ಯಾಚಾರ ಮಾಡಿ ಗರ್ಭಿಣಿಯಾದ ಬಳಿಕ ಹಲ್ಲೆ ಮಾಡಿ ಗರ್ಭಪಾತ!
Next Article ಕಾನೂನು ಸಚಿವರ ಕ್ಷೇತ್ರದಲ್ಲಿ PDO, ಗ್ರಾಪಂ ಸದಸ್ಯ ರಾಸಲೀಲೆ