Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    Viral

    I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid

    vartha chakraBy vartha chakraFebruary 2, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಫೆ.2: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕು ಎಂಬ ಕಾಂಗ್ರೆಸ್ ನಾಯಕರ ಲೆಕ್ಕಾಚಾರಕ್ಕೆ ಮಂತ್ರಿಗಳ ನಿಲುವು ಅಡ್ಡಿಯಾಗಿದೆ. ಚುನಾವಣೆಯ ಅಖಾಡಕ್ಕೆ ಧುಮುಕಲು ಮಂತ್ರಿಗಳು ನಿರಾಕರಿಸಿದರೆ ಕೆಲವು ಮಂತ್ರಿಗಳ ಚಲನ ವಲನಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಿಗಾ ಇಟ್ಟಿರುವ ಮಾಹಿತಿ ಹೊರ ಬಿದ್ದಿದೆ.
    ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ದೃಷ್ಟಿಯಿಂದ ಹಲವು ಮಂತ್ರಿಗಳನ್ನು ಚುನಾವಣೆಯಲ್ಲಿ ಸ್ಪರ್ಧೆ ಗಳಿಸಲು ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದರು ಈ ಸಂಬಂಧಪಟ್ಟ ಕಳೆದ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಭೋಜನಕೂಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಷಯ ಪ್ರಸ್ತಾಪಿಸಿದರು.

    ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಬೇಕಿದೆ ಎಂದು ಹೇಳಿದ ಡಿಕೆ ಶಿವಕುಮಾರ್ ಅವರು ಇದಕ್ಕಾಗಿ ಕೆಲವು ಮಂತ್ರಿಗಳು ಚುನಾವಣೆಯ ಅಖಾಡಕ್ಕೆ ಧುಮುಕಬೇಕಾಗುತ್ತದೆ. ಅದರಲ್ಲೂ ಸಚಿವರಾದ ಕೆ ಎನ್ ರಾಜಣ್ಣ ಡಾ. ಪರಮೇಶ್ವರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಮಹಾದೇವಪ್ಪ , ಎಂಬಿ ಪಾಟೀಲ್ ಕೆಎಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಮೊದಲದವರು ಸಿದ್ದರಾಗಬೇಕು ಎಂದು ಹೇಳಿದರೆನ್ನಲಾಗಿದೆ.
    ಶಿವಕುಮಾರ್ ಈ ರೀತಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ರಾಜಣ್ಣ ಮತ್ತು ಕೃಷ್ಣ ಬೈರೇಗೌಡ ಸಚಿವರ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ ಸಚಿವರಾಗಿದ್ದವರು ಸಂಸದರಾದರೆ ವಿಧಾನಸಭೆಗೆ ಮತ್ತೆ ಚುನಾವಣೆ ನಡೆಯಲಿದೆ ಎಂದು ಮತದಾರರು ನಮ್ಮನ್ನು ತಿರಸ್ಕರಿಸುವ ಸಾಧ್ಯತೆ ಹೆಚ್ಚಾಗಿದೆ ಇದು ತಮ್ಮ ಅನುಭವ ಎಂದು ಕೃಷ್ಣಬೈರೇಗೌಡ ಮನವರಿಕೆ ಮಾಡಿಕೊಟ್ಟರು ಎಂದು ಗೊತ್ತಾಗಿದೆ.
    ಈ ವೇಳೆ ಬಹುತೇಕ ಸಚಿವರು, ಲೋಕಸಭೆಗೆ ತಾವು ಸ್ಪರ್ಧಿಸುವುದರಿಂದ ಅನುಕೂಲ ಆಗುವುದಿಲ್ಲ ಅದರ ಬದಲಿಗೆ ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಇದನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುವಂತೆ ಹೇಳಿದರೆನ್ನಲಾಗಿದೆ.

    ಎಚ್ಚರಿಕೆ:
    ಸಭೆಯ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಚುನಾವಣೆ ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ ಇದನ್ನು ಯಶಸ್ವಿಯಾಗಿ ನಿಭಾಯಿಸುವ ಮೂಲಕ ಹೈಕಮಾಂಡ್ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು.
    ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮನೋಬಲ ಕುಗ್ಗಿಸುವ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಇದರ ಬಗ್ಗೆ ತಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.
    ಮಾತನಾಡುವ ಸಮಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ವರ್ತಿಸಬೇಕು ಯಾವುದೇ ನಾಯಕರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಬಾರದು ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಹೇಳುತ್ತಾ ಮತಯಾಚಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

    ಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪರವಾದ ವ್ಯಕ್ತಿಗಳು ಮತ್ತು ಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರದ ಆದಾಯ ತೆರಿಗೆ ನೀಡಿ ಮೊದಲಾದ ಸಂಸ್ಥೆಗಳು ತೀವ್ರ ನಿಗಾ ವಹಿಸಿವೆ ಯಾವುದೇ ಸಮಯದಲ್ಲಿ ದಾಳಿಯೂ ಕೂಡ ನಡೆಯಬಹುದು ಹೀಗಾಗಿ ಸಾಕಷ್ಟು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಉದ್ಯಮಿಗಳು ಮತ್ತು ಗುತ್ತಿಗೆದಾರರ ಜೊತೆ ವ್ಯವಹಾರಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

    AI Government IT raid Karnataka News Trending ಕಾಂಗ್ರೆಸ್ Election ಡಿ.ಕೆ ಶಿವಕುಮಾರ್ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress
    Next Article ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tr88 game on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • kypit kyrsovyu_epOn on ಲಂಚ ಆರೋಪದ ಸುಳಿಯಲ್ಲಿ Pralhad Joshi
    • Williamgeate on ಬಾಡಿಗೆ ಮನೆ ನಿವಾಸಿಗಳಿಗೆ ಸಚಿವ ಜಾರ್ಜ್ ಪರಿಹಾರ
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe