Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಮ್ಮ ಮೆಟ್ರೋ ಕಳಪೆ ಕಾಮಗಾರಿಗೆ ಇವರೇ ಹೊಣೆ
    ಅಪರಾಧ

    ನಮ್ಮ ಮೆಟ್ರೋ ಕಳಪೆ ಕಾಮಗಾರಿಗೆ ಇವರೇ ಹೊಣೆ

    vartha chakraBy vartha chakraJune 25, 2023Updated:June 25, 20231 Comment1 Min Read
    Facebook Twitter WhatsApp Pinterest LinkedIn Tumblr Email
    Bengaluru: The reinforcement cage of an underconstruction metro pillar collapses in Bengaluru, Tuesday, Jan. 10, 2023. (PTI Photo) (PTI01_10_2023_000134B)
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.23- ನಮ್ಮ ಮೆಟ್ರೋ ಕಾಮಗಾರಿಯ ಪಿಲ್ಲರ್ ಚೌಕಟ್ಟು ಕುಸಿದು ತಾಯಿ-ಮಗ ಮೃತಪಟ್ಟ
    ಪ್ರಕರಣದಲ್ಲಿ ಮೆಟ್ರೋ ಇಂಜಿನಿಯರ್ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಪ್ರಮುಖ ಕಾರಣ ಎಂದು ಕೋರ್ಟ್ ಗೆ ತಿಳಿಸಲಾಗಿದೆ.
    ಬೆಂಗಳೂರಿಗರನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಸಂಬಂಧ ಪೂರ್ವ ವಿಭಾಗದ
    ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ( ಚಾರ್ಜ್​ಶೀಟ್) ಸಲ್ಲಿಸಿದ್ದಾರೆ.
    ಗೋವಿಂದಪುರ ಪೊಲೀಸರು ದುರ್ಘಟನೆ ಸಂಬಂಧ ನ್ಯಾಯಾಲಯಕ್ಕೆ 1100 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ನಿರ್ಮಾಣ ಕಂಪನಿಯ ಇಂಜಿನಿಯರ್ಸ್ ಹಾಗೂ ಬಿಎಂಆರ್​ಸಿಎಲ್ ಇಂಜಿನಿಯರ್ ಗಳು ಸೇರಿ 11 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
    ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್ಎಸ್ಎಲ್ ರಿಪೋರ್ಟ್ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದರು. ಐಐಟಿ ರಿಪೋರ್ಟ್ ಮತ್ತು ಎಫ್ಎಸ್ಎಲ್ ರಿಪೋರ್ಟ್ ಅನ್ನು ಚಾರ್ಜ್​ಶೀಟ್​ನಲ್ಲಿ ಸೇರಿಸಲಾಗಿದೆ. ಅಧಿಕಾರಿಗಳ ಲೋಪ ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ.
    ತನಿಖೆ ವೇಳೆ ತನಿಖಾಧಿಕಾರಿಗಳು ಪ್ರಾಜೆಕ್ಟ್ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪಿಲ್ಲರ್ ಡಿಸೈನ್ ಹೇಗೆ ಮಾಡಲಾಗಿತ್ತು? ಸುರಕ್ಷತೆ ಏನೆಲ್ಲಾ ಕ್ರಮ ಕೈಗೊಳ್ಳಬೇಕಿತ್ತು? ಪ್ರರಕಣದಲ್ಲಿ ಲೋಪ ಯಾರದು? ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸಿದ್ದರು.
    ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್ಎಸ್ಎಲ್ ವರದಿ ಪಡೆದು‌ ಘಟನೆ ನಡೆದು ಐದು ತಿಂಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
    ಘಟನೆ ಹಿನ್ನೆಲೆ:
    ಗದಗ ಮೂಲದ ಲೋಹಿತ್​ ಕುಮಾರ್​ ಮತ್ತು ತೇಜಸ್ವಿನಿ ದಂಪತಿ ಇಬ್ಬರೂ ಬೆಂಗಳೂರಿನಲ್ಲಿ 10 ವರ್ಷಗಳಿಂದ ವಾಸವಿದ್ದರು. ಇಬ್ಬರೂ ಸಿವಿಲ್ ಇಂಜಿನಿಯರ್​ ಆಗಿದ್ದರು. ಮಕ್ಕಳಿಬ್ಬರನ್ನೂ ಬೇಬಿ ಸಿಟ್ಟಿಂಗ್​ಗೆ ಬಿಟ್ಟು, ಪತ್ನಿಯನ್ನ ಕಂಪನಿ ಬಳಿ ಡ್ರಾಪ್​ ಮಾಡಿ ಬಳಿ ತಾನೂ ಕೆಲಸಕ್ಕೆ ಹೋಗಲೆಂದು ಪತ್ನಿ-ಮಕ್ಕಳನ್ನು ಬೈಕ್​ನಲ್ಲಿ ಲೋಹಿತ್ ಕರೆದುಕೊಂಡು ಜನವರಿ 10ರ ಮಂಗಳವಾರ ಬೆಳಗ್ಗೆ ಹೋಗುತ್ತಿದ್ದರು. ದುರಾದೃಷ್ಟವಶಾತ್​ ಚಲಿಸುತ್ತಿದ್ದ ಬೈಕ್​ ಮೇಲೆ ಅಂದು 10.30ರ ಸುಮಾರಿಗೆ ಮೆಟ್ರೋ ಪಿಲ್ಲರ್​ ಚೌಕಟ್ಟು ಕುಸಿದು ಬಿದ್ದು, ನಾಲ್ವರೂ ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗ ಮೃತಪಟ್ಟರು. ಲೋಹಿತ್​ ಮತ್ತು ಮಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು

    Verbattle
    Verbattle
    Verbattle
    ನ್ಯಾಯ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಕರನ ಅಪಹರಿಸಿದ ಪ್ರಿಯತಮೆ
    Next Article Torontoದಲ್ಲಿ ಮೇಯರ್ ಸ್ಥಾನಕ್ಕೆ ಸ್ಪರ್ದಿಸುತ್ತಿರುವ ನಾಯಿ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hughvf on ವಿಜಯೇಂದ್ರ ಬದಲಾವಣೆಗೆ ಹೆಚ್ಚಿದ ಒತ್ತಡ.
    • Uvndvu on ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.
    • Lrvdzw on ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕು ಗೊತ್ತಾ
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.