ಬೆಂಗಳೂರು – ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆ ಬಯಸಿ Election ಕಣಕ್ಕೆ ಧುಮುಕಿರುವ ತೇಜಸ್ವಿ ಸೂರ್ಯ (Tejasvi Surya) ಇದೀಗ ವಿವಾದವೊಂದರಲ್ಲಿ ಸಿಲುಕಿದ್ದಾರೆ.
ಬೃಹತ್ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಮುಂದಾದ ಅವರು ವಿವಿಪುರಂನಲ್ಲಿರುವ ಜೈನ್ ಕಾಲೇಜು ಆಡಳಿತ ಮಂಡಳಿ ಜೊತೆ ಮಾತನಾಡಿ ಕಾಲೇಜು ವಿದ್ಯಾರ್ಥಿಗಳ ಬೃಹತ್ ಮೆರವಣಿಗೆಗೆ ಯೋಜನೆ ರೂಪಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.
Source: Kannada Planet
ತೇಜಸ್ವಿ ಸೂರ್ಯ ಅವರು ಈ ಕುರಿತಂತೆ ಮಾಡಿದ ಮನವಿಗೆ ಸ್ಪಂದಿಸಿದ ಜೈನ್ ಕಾಲೇಜು ಆಡಳಿತ ಮಂಡಳಿ ಎಲ್ಲ ವಿದ್ಯಾರ್ಥಿಗಳು ತೇಜಸ್ವಿ ಸೂರ್ಯ ಅವರ ಭಾವಚಿತ್ರ ಇರುವ ಟೀ ಶರ್ಟ್ ಧರಿಸಿ ನಾಮಪತ್ರ ಸಲ್ಲಿಸಲು ತೆರಳುವ ಮೆರವಣಿಗೆಯಲ್ಲಿ ಸಾಗಬೇಕೆಂದು ಸೂಚಿಸಿದೆ ಎಂದು ಆರೋಪಿಸಲಾಗಿದೆ. ಕಾಲೇಜು ಆಡಳಿತ ಮಂಡಳಿಯ ಈ ಸೂಚನೆಯ ವಿರುದ್ಧ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ರೋಹಿನ್ ಆನಂದ್ ಎಂಬವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ತೇಜಸ್ವಿ ಸೂರ್ಯ ಅವರು ಕೊಳಕು ತಂತ್ರಗಳನ್ನು ಮಾಡುತ್ತಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ತಾನು ಸ್ಪರ್ಧಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದ್ದಾರೆ.ಇಲ್ಲದಿದ್ದರೆ ಅವರಿಗೆ ಹಾಜರಾತಿ ನೀಡುವುದಿಲ್ಲ ಎಂದು ಹೇಳಾಗಿದೆ. ನಾಮಪತ್ರ ಸಲ್ಲಿಕೆ ರ್ಯಾಲಿಯಲ್ಲಿ ಅವರ ಹೆಸರು ಮುದ್ರಿತ ಟೀ ಶರ್ಟ್‌ಗಳನ್ನು ಧರಿಸಲು ಮತ್ತು ತೇಜಸ್ವಿ ಸೂರ್ಯ ವಿರುದ್ಧ ಘೋಷಣೆಗಳನ್ನು ಕೂಗುವಂತೆ ಸೂಚಿಸಲಾಗಿದೆ.
ಈ ಪೋಸ್ಟ್ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕಾಂಗ್ರೆಸ್ ನ ಹಲವು ನಾಯಕರು ತೇಜಸ್ವಿ ಸೂರ್ಯ ಮತ್ತು ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
4 Comments
выведение из запоя на дому санкт петербург выведение из запоя на дому санкт петербург .
семена почтой россии интернет магазин http://www.semenaplus74.ru .
вызов нарколога на дом частная скорая помощь вызов нарколога на дом частная скорая помощь .
Уборка квартир после сумасшедших https://ochistka-gryaznyh-kvartir-msk.ru/