ಬೆಂಗಳೂರು, ಏ.11: ಖ್ಯಾತ ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳಿಗೆ ಕರ್ನಾಟಕದಲ್ಲಿ ಅಪಾರ ಪ್ರಮಾಣದ ಬೇಡಿಕೆ ಇದೆ. ಪತಂಜಲಿ ಉತ್ಪನ್ನಗಳು ದೊಡ್ಡ ರೀತಿಯಲ್ಲಿ ಮಾರಾಟವಾಗುತ್ತಿವೆ. ಇದರ ನಡುವೆ ಪತಂಜಲಿ ಆಯುರ್ವೇದ ಸಂಸ್ಥೆಯ ಆರೋಗ್ಯ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳ ಜಾಹೀರಾತಿನ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷಿಪ ವ್ಯಕ್ತಪಡಿಸಿ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇಂತಹ ನಿರ್ಧಾರ ಪ್ರಕಟಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಬಾಬಾ ರಾಮದೇವ್ ಮತ್ತು ಪತಂಜಲಿ ಸಂಸ್ಥೆ ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, Business ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆಯನ್ನು ಹೊಂದಿರುವ ಇದು ಘೋರ ಅಪರಾಧ ಎಂದು ದಿನೇಶ್ ಕುಟುಕಿದ್ದಾರೆ.
ಸಂಸ್ಥೆಯ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ನನ್ನ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.