ಬೆಂಗಳೂರು, ನ.18- ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ನಡುವೆ ಮಾತಿನ ಜಟಾಪಟಿ ತೀವ್ರಗೊಂಡಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಅವರ ಕುರಿತು ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ. ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ ಎಂದು ಕುಮಾರಸ್ವಾಮಿ ಆರೋಪಸಿದ್ದಾರೆ.
ಈ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು,ಕುಮಾರಸ್ವಾಮಿ ಅವರ ಮಾನಸಿಕ ಸ್ವಾಸ್ಥ್ಯ ಕಲಕಿದೆ ಯಾರಾದರೂ ಹಿತೈಷಿಗಳು ಅವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ ಎಂದು ಪ್ರಶ್ನಿಸಿದ್ದಾರೆ.
ವಿವೇಕಾನಂದ ಎನ್ನುವ ಅಧಿಕಾರಿಯ ವರ್ಗಾವಣೆ ಸಂಬಂಧ ಪ್ರಸ್ತಾಪಿಸಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕುರಿತು ಸುಲಿಗೆ ಪುತ್ರ, ಕೆಡಿಪಿ ಕಲಿ ಎಂದೆಲ್ಲಾ ಟೀಕಿಸಿದ್ದಾರೆ.
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಒಂದು ಸರ್ಕಾರ, ವಿಸ್ಮಯಗಳ ಆಗರ ಎಂದು ವ್ಯಂಗ್ಯವಾಡಿದ್ದಾರೆ.
ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್‍ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರ್ಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಬೇಕು. ಅದು ನಿಮ್ಮ ದುರ್ವಿಧಿ. ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲೆ ನಿಮ್ಮ ಸುಲಿಗೆಪುತ್ರನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಎಂದು ಆರೋಪಿಸಿದ್ದಾರೆ.
ಸತ್ಯ ಹೇಳಿದರೆ ಗುಂಪು ಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಚಿಕಿತ್ಸೆ ಕೊಡಿಸಿ:
ಈ ಎಲ್ಲಾ ಆರೋಪಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೀವಮಾನದಲ್ಲಿ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ಥ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗ್ಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ?’ ಎಂದು ಹೇಳಿದ್ದಾರೆ.
ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ, ಎಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸಿ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ. ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ, ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.
. ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಎಚ್.ಡಿ.ಕುಮಾರಸ್ವಾಮಿವಯರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹೇಳಿದ್ದಾರೆ.
ದಂಧೆ ಮಾಡಿದ್ದರಾ..?
ಮತ್ತೊಂದೆಡೆ,ಲಿಸ್ಟ್ ಎನ್ನುತ್ತಿದ್ದಂತೆ ಅದು ವರ್ಗಾವಣೆಯ ಪಟ್ಟಿ ಎಂದೇ ಭಾವಿಸುವುದೇಕೆ ಎಂದು ಪ್ರಶ್ನಿಸಿರುವ ಮಾಜಿ ಶಾಸಕ ಯತೀಂದ್ರಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರೆನೋ ಗೋತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಗಾವಣೆಯಲ್ಲೂ ದಂಧೆ ನಡೆದಿದೆ ಎಂದು ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
ವೈರಲ್ ಆಗಿರುವ ವಿಡಿಯೋ ಬಗ್ಗೆ ನಾನು ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತೇನೆ. ಮೊಬೈಲ್ ಸಂಭಾಷಣೆಯಲ್ಲಿ ನಾನು ದುಡ್ಡಿನ ಕುರಿತು ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು ಎಂದಿದ್ದಾರೆ ಅನಗತ್ಯವಾಗಿ ಎಲ್ಲಾ ವಿಚಾರಗಲಿಗೂ ನನ್ನ ಹೆಸರನ್ನು ಎಳೆದು ತರಬೇಡಿ, ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಎನ್ನುವವರ ವರ್ಗಾವಣೆ ಎಲ್ಲಿಗೆ ಆಗಿದೆ. ಆ ಕ್ಷೇತ್ರದ ವ್ಯಾಪ್ತಿ ಯಾವುದು. ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದರು.
ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎಂಬುವರ ಹೆಸರು ಇರುವುದು ನನಗೆ ಗೊತ್ತಿಲ್ಲ,ಕುಮಾರಸ್ವಾಮಿಯವರ ಪತ್ನಿ, ಪುತ್ರ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಗಳಲ್ಲೆಲ್ಲಾ ದಂಧೆಯೇ ನಡೆದಿದೆಯೇ ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ ಎಂದು ಕೇಳಿದ್ದಾರೆ
9 Comments
как вызвать наркологическую скорую помощь в москве как вызвать наркологическую скорую помощь в москве .
сумасшедшие идеи малого бизнеса сумасшедшие идеи малого бизнеса .
Вывод из запоя на дому https://fizioterapijakeskic.com/ .
https://www.youtube.com/watch?v=NntCT5Wllvo/
Дезинфекция деревянного дома от трупного яда https://dezinfekciya-ot-smerti-msk.ru/
элитные проститутки http://www.drive-models.ru .
лечение запоя алкоголизма выведение [url=https://xn—–7kcablenaafvie2ajgchok2abjaz3cd3a1k2h.xn--p1ai/]xn—–7kcablenaafvie2ajgchok2abjaz3cd3a1k2h.xn--p1ai[/url] .
view insta stories anonymously [url=anonstoriesview.com]view insta stories anonymously[/url] .
instagram account [url=anonstoriesview.com]instagram account[/url] .