ತುಮಕೂರು : ಕೆಎಸ್ಆರ್ಟಿಸಿ ಬಸ್ಸು ಹಾಗು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ಗಿರೀಶ್ (37) ವರ್ಷ ಮಾನ್ಯ (17)ವರ್ಷ ಎಂದು ಗುರುತಿಸಲಾಗಿದ್ದು.
ತುಮಕೂರು -ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ಸಂಭವಿಸಿದೆ..!!
ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.