ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮೈಸೂರು ಶ್ರೀಕಂಠಯ್ಯ ಉಮೇಶ್ ಭಾನುವಾರ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಕಾಲು ಜಾರಿ ಬಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ.
ಎಂ.ಎಸ್ ಉಮೇಶ್ 1945ರ ಏಪ್ರಿಲ್ 24ರಂದು ಮೈಸೂರಿನಲ್ಲಿ ಜನಿಸಿದರು. ಶ್ರೀಕಂಠಯ್ಯ ಮತ್ತು ನಂಜಮ್ಮ ಪುತ್ರನಾಗಿ ಜನಿಸಿದ ಉಮೇಶ್ 1960ರಲ್ಲಿ ಮಕ್ಕಳ ರಾಜ್ಯ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಉಮೇಶ್ ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.
1977ರಲ್ಲಿ ಕಥಾ ಸಂಗಮ,1978ರಲ್ಲಿ ನಾಗರ ಹೊಳೆ, 1981ರಲ್ಲಿ ಗುರುಶಿಷ್ಯರು, ಅನುಪಮ, 1983ರಲ್ಲಿ ಕಾಮನ ಬಿಲ್ಲು, 1984ರಲ್ಲಿ ಅಪೂರ್ವ ಸಂಗಮ, 1987ರಲ್ಲಿ ಶೃತಿ ಸೇರಿದಾಗ ಸೇರಿದಂತೆ 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ನಟಿಸಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದ್ದರು.
Previous Articleಡಿ.ಕೆ ಶಿವಕುಮಾರ್ ಪೋಸ್ಟ್ ಭಾರಿ ವೈರಲ್
Next Article ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ – ಡಿ.ಕೆ ಶಿವಕುಮಾರ್

