Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ
    ಅಪರಾಧ

    ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ

    vartha chakraBy vartha chakraFebruary 25, 2023Updated:February 28, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.25- ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಅವರ ದುಬಾರಿ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಇರಿಸಿದ್ದ ಘಟನೆ ನಗರದ ಕ್ವೀನ್ಸ್ ರಸ್ತೆಯಲ್ಲಿ ನಡೆದಿದೆ.
    ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಕದಲ್ಲೇ ಇರುವ ಐ ಕಾರ್ಸ್ ಸ್ಟುಡಿಯೋದಲ್ಲಿ‌ ಭೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ಅಳವಡಿಸಲಾಗಿದ್ದ ಕಾರು ನಿಂತಿರುವುದನ್ನು ಅವರ ಆಪ್ತ ಸಹಾಯಕ ಮಾದೇಶ್ ಗಮನಿಸಿದ್ದಾರೆ.
    ತಕ್ಷಣ ಶೋರೂಂ ಒಳಗೆ ತೆರಳಿ ಕಾರಿನ ಬಗ್ಗೆ ವಿಚಾರಿಸಿದಾಗ, ‘ಕಾರು ಮಾರಾಟಕ್ಕಿದೆ, ನಿಮಗೆ ಬೇಕಿತ್ತಾ? ಟೆಸ್ಟ್ ರೈಡ್ ಮಾಡಿ ನೋಡುವಿರಾ? ಎಂದು ಶೋರೂಂ ಸಿಬ್ಬಂದಿ ಕೇಳಿದ್ದಾರೆ.
    ಮತ್ತಷ್ಟು ಅನುಮಾನಗೊಂಡು ಕಾರಿನ ದಾಖಲಾತಿಗಳನ್ನು ಪರಿಶೀಲಿಸಿದಾಗ ಅಚ್ಚರಿ ಎಂಬಂತೆ ಆರ್.ಸಿ ಕೂಡ ಬೋಜೇಗೌಡರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ತಕ್ಷಣ ಬೋಜೇಗೌಡರಿಗೆ ಕರೆ ಮಾಡಿದ್ದ ಅವರ ಆಪ್ತ ಸಹಾಯಕ ಸರ್ ‌ನಿಮ್ಮ ಕಾರ್ ಮಾರಾಟ ಮಾಡಿರುವಿರಾ ಎಂದು ಕೇಳಿದ್ದಾರೆ. ಅದಕ್ಕೆ ಬೋಜೇಗೌಡರು ಇಲ್ಲ, ಕಾರು ತಮ್ಮ ಬಳಿಯೇ ಇದೆ ಎಂದಾಗ, ಶೋರೂಂನಲ್ಲಿ ನಿಮ್ಮ‌ ಕಾರಿನ ನಂಬರ್​​ ಮತ್ತೊಂದು ಕಾರು ಇದೆ ಎಂದು ವಿಷಯ ಮುಟ್ಟಿಸಿದ ಬಳಿಕ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
    ಮಾಲೀಕ ವಶಕ್ಕೆ:
    ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸರು ಕಾರಿನ ಸಮೇತ ಐ ಕಾರ್ಸ್ ಸ್ಟುಡಿಯೋ ಮಾಲೀಕ ಇಮ್ರಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಗೆ ಬೇರೆಯವರು ಕಾರು ಕೊಟ್ಟಿದ್ದಾರೆ ಎಂದು ಇಮ್ರಾನ್ ಹೇಳುತ್ತಿದ್ದು, ವಿಚಾರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ಬದಲಿಸಿ ಮಾರಾಟ:
    ದುಬಾರಿ ಬೆಲೆಯ ಕಾರುಗಳನ್ನು‌ ಕ್ಷಣಾರ್ಧದಲ್ಲಿ ಕದ್ದು ನಂಬರ್ ಪ್ಲೇಟ್ ಬದಲಾಯಿಸಿ ಸಾರ್ವಜನಿಕರಿಗೆ ಕಡಿಮೆ ಬೆಲೆ‌ಗೆ ಮಾರಾಟ ಮಾಡುತ್ತಿದ್ದ ಕಳ್ಳನನ್ನು ಪುಲಕೇಶಿ ನಗರ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.
    ಮುಳಬಾಗಿಲು ಮೂಲದ ಮೊಹಮ್ಮದ್ ಫೈರೋಜ್ ಪಾಷಾ ಬಂಧಿತ ಆರೋಪಿ. ಈತನಿಂದ 20 ಲಕ್ಷ ರೂ. ಮೌಲ್ಯದ ಮಾರುತಿ ಬಲೆನೊ ಕಾರು, ಮಾರುತಿ ಈಕೋ ಹಾಗೂ ಮಿನಿ ಟೆಂಪೋವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
    ನಕಲಿ ದಾಖಲೆ ಸೃಷ್ಟಿ:
    ಸಾರ್ವಜನಿಕ ಪ್ರದೇಶಗಳಲ್ಲಿ‌ ನಿಲ್ಲಿಸಿದ್ದ ಐಷಾರಾಮಿ ಕಾರುಗಳ‌ನ್ನು ಸುಲಭವಾಗಿ ಕಳ್ಳತನ ಮಾಡುತ್ತಿದ್ದ ಆರೋಪಿ ಓಎಲ್ಎಕ್ಸ್​ಗೆ ಹೋಗಿ ಮಾರಾಟವಾಗುವ ಕಾರಿನ ನೋಂದಣಿ ಸಂಖ್ಯೆಯನ್ನು ತೆಗೆದುಕೊಂಡು ಕದ್ದ ಕಾರಿಗೆ ಬದಲಾಯಿಸುತ್ತಿದ್ದ. ಬಳಿಕ ಗ್ರಾಹಕರನ್ನು ಸಂಪರ್ಕಿಸಿ ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಅಸಲಿ ದಾಖಲಾತಿಯಂತೆ ನಕಲಿ ದಾಖಲೆ ಸೃಷ್ಟಿಸಿ ಮಾಲೀಕನ ಹೆಸರಿನಲ್ಲಿ ಸಹಿ ಹಾಕುತ್ತಿದ್ದ.‌ ತ್ವರಿತವಾಗಿ ಹಣ ನೀಡುವಂತೆ ಒತ್ತಡ ಹಾಕುತ್ತಿರಲಿಲ್ಲ.‌ ಇದರಿಂದ ಆರೋಪಿ ಮೇಲೆ ಸಾರ್ವಜನಿಕರಿಗೆ ನಂಬಿಕೆ ಹುಟ್ಟುವಂತೆ ಮಾಡಿದ್ದ ಎಂದು ಪೊಲೀಸರು ತಿಳಿಸಿದರು.

    Verbattle
    Verbattle
    Verbattle
    ಕಳ್ಳತನ ಕಾಂಗ್ರೆಸ್ ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಬೀದಿ ನಾಯಿಗಳಿಗೆ ಊಟ ಹಾಕಿದ್ದೆ ತಪ್ಪಾಯ್ತಾ?
    Next Article SSLC ಮತ್ತು PUC ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Lauqwb on February 13, 2026 12:32 pm

      mgm sports betting app betmgm-play betmgm IN

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_vcSi on ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    • LinwoodGah on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Glennhof on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.