Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೊಮ್ಮೆ ಗುಟುರು ಹಾಕಿದ ಸೋಮಣ್ಣ | V Somanna
    Viral

    ಮತ್ತೊಮ್ಮೆ ಗುಟುರು ಹಾಕಿದ ಸೋಮಣ್ಣ | V Somanna

    vartha chakraBy vartha chakraJanuary 6, 202411 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.6- ಹೈಕಮಾಂಡ್ ಮಧ್ಯಪ್ರವೇಶದೊಂದಿಗೆ ಕೊಂಚ ಮಟ್ಟಿಗೆ ಮೆತ್ತಗಾದವರಂತೆ ಕಂಡು ಬಂದಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ (V Somanna) ಮತ್ತೊಮ್ಮೆ ಗುಡುಗಿದ್ದಾರೆ.
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶದ ಬದಲಿಗೆ ರಾಜ್ಯಸಭೆಯ ಸದಸ್ಯತ್ವ ನೀಡುವಂತೆ ವರಿಷ್ಠರಿಗೆ ಬೇಡಿಕೆ ಸಲ್ಲಿಸಿರುವ ಅವರು ಇದೀಗ ಕೆಲವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ.
    ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಮೇಲೆ ಕೂಡಲೇ ಶಿಸ್ತು ಕ್ರಮ ಜರುಗಿಸದಿದ್ದರೆ ಇದೇ ತಿಂಗಳ 16ರಂದು ಎಲ್ಲವನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಯಾರು? ಹೇಗೆ ಕೆಲಸ ಮಾಡಿದ್ದಾರೆ, ಏನೇನು ಮಾಡಿದ್ದಾರೆ ಎಂಬುದು ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಗೊತ್ತಿದೆ. ಕೂಡಲೇ ಅವರು ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ನಾನೇ ಬಹಿರಂಗಪಡಿಸುತ್ತೇನೆ ಎಂದು ಎಚ್ಚರಿಸಿದರು.
    ನಮ್ಮಂತಹವರ ಮೇಲೆ ಗದಾಪ್ರಹಾರ ಮಾಡಿದರೆ ಪರಿಣಾಮ ಏನಾಗುತ್ತದೆ ಎಂಬುದನ್ನು ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದನ್ನೇ ನಡೆಸಿಕೊಂಡು ಹೋಗುತ್ತೇನೆ ಎಂಬ ಧೋರಣೆಯನ್ನು ಮೊದಲು ಬಿಡಬೇಕು ಎಂದು ಕಿವಿಮಾತು‌ ಹೇಳಿದರು.

    ವರಿಷ್ಠರ ಸೂಚನೆ ಮೇರೆಗೆ ನಾನು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಆದರೆ ನಮ್ಮವರೇ ನನಗೆ ಏನು ಮಾಡಿದ್ದಾರೆ ಎಂಬುದು ವಿಜಯೇಂದ್ರ ಅವರಿಗೆ ಗೊತ್ತಿಲ್ಲವೇನೆಂದಲ್ಲ. ಬೇರೆ ಪಕ್ಷದವರ ಜೊತೆ ಕೈ ಜೋಡಿಸಿದವರು ಯಾರು ಎಂಬುದು ನಮ್ಮ ಅಧ್ಯಕ್ಷರಿಗೆ ಗೊತ್ತಿದೆ. ತಕ್ಷಣವೇ ಅಂಥವರ ಮೇಲೆ ಕ್ರಮ ಆಗಲೇಬೇಕು. ಪಕ್ಷಕ್ಕೆ ಮುಜುಗರವಾಗಬಾರದೆಂದು ನಾನು ಕೆಲವು ಕಹಿ ಸತ್ಯಗಳನ್ನು ನುಂಗಿಕೊಂಡಿದ್ದೇನೆ. ಎಲ್ಲಿಯವರೆಗೂ ನಾನು ಸಹಿಸಿಕೊಳ್ಳಲಿ ಎಂದು ಪ್ರಶ್ನೆ ಮಾಡಿದರು.
    ನಾನು ಕಳೆದ ನಾಲ್ಕು ದಶಕಗಳಿಂದ ರಾಜಕಾರಣದಲ್ಲಿ ಇದ್ದೇನೆ. ಪಕ್ಷ ಬದಲಾಯಿಸಿದರೂ ಅನಿವಾರ್ಯ ಕಾರಣಗಳಿಂದ ಪಕ್ಷ ಬದಲಾಯಿಸಿರಬಹುದು. ಆದರೆ ಸೋಮಣ್ಣ ಎಂದಿಗೂ ವಿಶ್ವಾಸ ದ್ರೋಹ ಮಾಡಿದ ವ್ಯಕ್ತಿಯಲ್ಲ. ನಮಗೆ ನಮ್ಮವರಿಂದಲೇ ಮೋಸವಾಗಿದೆ. ಅಂಥವರನ್ನು ಪಕ್ಷದಲ್ಲಿ ಇಟ್ಟುಕೊಳ್ಳಬೇಕೆ?ಇದನ್ನು ವರಿಷ್ಠರು ತೀರ್ಮಾನ ಮಾಡಬೇಕೆಂದು ಒತ್ತಾಯಿಸಿದರು.

    ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ನಾನು ಪಕ್ಷಕ್ಕೆ ಮುಜುಗರವಾಗಬಾರದೆಂದು ಯಾವುದೇ ಹೇಳಿಕೆಗಳನ್ನು ಕೊಟ್ಟಿಲ್ಲ. ನನಗಾಗಿರುವ ನೋವು ಯಾರಿಗೂ ಬರಬಾರದು. ಭವಿಷ್ಯದಲ್ಲಿ ಇದು ಮರುಕಳಿಸಬಾರದೆಂದರೆ ಕೆಲವರ ವಿರುದ್ಧ ಕ್ರಮ ಆಗಲೇಬೇಕು. ಪಕ್ಷದಲ್ಲಿದ್ದುಕೊಂಡೇ ನನಗೆ ಮೋಸ ಮಾಡುತ್ತಾರೆ ಎಂದರೆ ಯಾರನ್ನು ನಂಬಬೇಕೆಂದು ವಿಷಾದ ವ್ಯಕ್ತಪಡಿಸಿದರು.
    ಇದೇ ತಿಂಗಳ 8ರಂದು ನಾನು ದೆಹಲಿಗೆ ತೆರಳುತ್ತಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ನಾನು ಯಾರ ವಿರುದ್ಧವೂ ದೂರು ನೀಡುವುದಿಲ್ಲ. ನನಗೆ ಯಾರಿಂದ ಅನ್ಯಾಯವಾಗಿದೆ ಎಂಬುದನ್ನು ಅವರ ಗಮನಕ್ಕೆ ತರುತ್ತೇನೆ ಎಂದರು.

    Verbattle
    Verbattle
    Verbattle
    BJP Congress m News Politics somanna Trending V somanna Election ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleGuest Lecturer’s ಗೌರವ ಧನ ಹೆಚ್ಚಳ
    Next Article ಇನ್ಸ್ಟಾಗ್ರಾಮ್ ರೀಲ್ಸ್ ಹುಚ್ಚಿಗೆ ತಾಯಿ ಮಗ ಬಲಿ | Instagram
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Tracymix on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.