ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಶುಕ್ರವಾರ ಸಂಜೆ ನಾಪೋಕ್ಲು ಪಟ್ಟಣದ ಸೂಪರ್ ಮಾರ್ಕೆಟ್ ಮುಂಭಾಗದಲ್ಲಿ ಹಿಂದೂ ಸಂಗಮ ಕಾರ್ಯಕ್ರಮದ ಪ್ರಚಾರದಲ್ಲಿ ತೊಡಗಿದ್ದ ದೊಡ್ಡಪುಲಿಕೋಟು ಗ್ರಾಮದ ನಿವಾಸಿ, ಹಿಂದೂ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಕಾರಿಯಪ್ಪ ಅವರ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಚಾರದ ವೇಳೆ ಮೈಕ್ ಬಳಸಬಾರದು ಎಂದು ವಾಗ್ವಾದಕ್ಕಿಳಿದ ತಂಡ, ಗೌತಮ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಸುಹೇಲ್ ಪಿ.ಎಚ್, ಕೆ.ಇ ಸಿದ್ದಿಕ್, ಪಿ.ಎಂ ನಫಿ, ಮತ್ತು ಪಿ.ಎ ರಶೀದ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಇವರೆಲ್ಲರೂ ನಾಪೋಕ್ಲು ಮತ್ತು ಸುತ್ತಮುತ್ತಲ ಗ್ರಾಮದ ನಿವಾಸಿಗಳಾಗಿದ್ದಾರೆ.
ಹಲ್ಲೆ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ನಾಪೋಕ್ಲುವಿನಲ್ಲಿ ರಸ್ತೆ ತಡೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಇದರಿಂದ ಪಟ್ಟಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ನಾಪೋಕ್ಲುವಿನಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. ಗಾಯಾಳು ಗೌತಮ್ ಅವರಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.


2 Comments
References:
Chukchansi casino
References:
http://uchkombinat.com.ua/user/bookbridge2/
References:
Spawn suppliments
References:
https://git.saintdoggie.org/daniella42y850