ಬೆಂಗಳೂರು,
ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ವರೆಗಿನ ನಗದು ರಹಿತ ಆರೋಗ್ಯ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಈ ಸೌಲಭ್ಯವನ್ನು ತಮಗೂ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಎಲ್ಲಾ ತಾತ್ಕಾಲಿಕ ಉದ್ಯೋಗಿಗಳಿಗೂ ಆರೋಗ್ಯ ಭದ್ರತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ.
ಈ ಯೋಜನೆ ಪ್ರಕಾರ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5,00,000 ರೂ. ವರೆಗೆ ನಗದು ರಹಿತ ಚಿಕಿತ್ಸೆ ಲಭ್ಯವಿರುತ್ತದೆ. ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯ ಫಲಾನುಭವಿಗಳು. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಂಗಳವಾರ ಈ ಆದೇಶವನ್ನು ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ ಸಾವಿರಾರು ದಿನಗೂಲಿ ನೌಕರರ ಕುಟುಂಬಗಳಿಗೆ ತುರ್ತು ಚಿಕಿತ್ಸೆಯ ಸಮಯದಲ್ಲಿ ಆರ್ಥಿಕ ನೆರವು ಸಿಗುವಂತಾಗಿದೆ.
Archives
- April 2026
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

