ಬೆಂಗಳೂರು,
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮಾರ್ಪಡಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಬಿಜಿ ರಾಮ್ ಜಿ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಇದೀಗ ಈ ಬಗ್ಗೆ ಚರ್ಚೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಸಿದ್ಧತೆ ನಡೆಸಿದೆ.
ಜನವರಿ ಕೊನೆಯ ವಾರದಲ್ಲಿ ಎರಡು ದಿನಗಳ ಕಾಲ ಪ್ರತ್ಯೇಕವಾಗಿ ಈ ಎರಡು ಮಸೂದೆಗಳ ಬಗ್ಗೆ ಚರ್ಚೆ ನಡೆಸಿ ಸಾಧಕ ಬಾಧಕಗಳನ್ನು ಸಾರ್ವಜನಿಕರ ಮುಂದೆ ಇಡಲು ನಿನ್ನೆ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಶೇಷ ಅಧಿವೇಶನ ಕರೆಯುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲು ಸಂಪುಟ ಅಧಿಕಾರ ನೀಡಿದೆ.
ಉನ್ನತ ಮೂಲಗಳ ಪ್ರಕಾರ ಜನವರಿ ಕೊನೆಯ ವಾರದಲ್ಲಿ ಎರಡು ದಿನ ವಿಶೇಷ ಅಧಿವೇಶನ ನಡೆಯಲಿದ್ದು ಕೇಂದ್ರ ಸರ್ಕಾರದ ವಿಬಿಜಿ ರಾಮ್ ಜಿ ಕಾನೂನಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಕಾನೂನು ರಚನೆ ಮಾಡುವ ಕುರಿತಂತೆ ಚರ್ಚೆ ನಡೆಸಲಿದೆ ಎಂದು ಗೊತ್ತಾಗಿದೆ.
Previous Articleಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
Next Article ಮಾಜಿ ಮಂತ್ರಿಗೆ ಸಿಬಿಐ ಶಾಕ್!


2 Comments
pharmacy order online: FormuLine Pharmacy – best mail order pharmacy
reputable online pharmacy no prescription: india online pharmacy – online pharmacy no rx