ಬೆಂಗಳೂರು:
ವಲಸೆ ಕಾರ್ಮಿಕರ ಮೇಲೆ ದಬ್ಬಾಳಿಕೆ ಮತ್ತು ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಶುಕ್ರವಾರ ತಡರಾತ್ರಿ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದಲ್ಲಿರುವ ವಲಸೆ ಕಾರ್ಮಿಕರು ಮತ್ತು ನಿರಾಶ್ರಿತರ ಶೆಡ್‌ಗಳಿಗೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಪುನೀತ್, ತಾನೇ ಅಧಿಕಾರಿ ಎಂಬಂತೆ ಅವರ ಗೌಪ್ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದನು. ಈ ಕೃತ್ಯದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ವಿವಾದ ಸೃಷ್ಟಿಸಿದ್ದನು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್ಪಿಯವರ ನೇತೃತ್ವದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಘಟನೆಯ ವಿವರ:
ಕಳೆದ ಕೆಲ ದಿನಗಳಿಂದ ಪುನೀತ್ ಕೆರೆಹಳ್ಳಿ, ಬೆಂಗಳೂರಿನ ವಿವಿಧೆಡೆ ಕಾರ್ಮಿಕರ ಪೌರತ್ವ ಪ್ರಶ್ನಿಸುವ ಮತ್ತು ಬೆದರಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ‘ದ್ವೇಷ ಭಾಷಣ ವಿರೋಧಿ ಅಭಿಯಾನ’ದ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಅವರನ್ನು ಭೇಟಿ ಮಾಡಿ, ಈತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ದೂರು ಬಂದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಆರೋಪಿಯ ಬೆಂಬಲಿಗರು ಠಾಣೆಯ ಮುಂದೆ ಜಮಾಯಿಸಿದ್ದರು. ಪರಿಸ್ಥಿತಿ ನಿಯಂತ್ರಿಸಲು ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕಾರ್ಮಿಕರ ಶೆಡ್‌ಗಳಿಗೆ ನುಗ್ಗಿ ‘ಪೌರತ್ವ’ ತಪಾಸಣೆ: ಪುನೀತ್ ಕೆರೆಹಳ್ಳಿ ಬಂಧನ
Previous Articleಶತಾಯುಷಿ ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
Next Article ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

