Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ
    ಸುದ್ದಿ

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    vartha chakraBy vartha chakraJanuary 22, 2026Updated:January 22, 2026No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.20:
    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
    ಲಿಂಗಾಯತ ವೀರಶೈವ ಮಹಾಸಭಾ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದು ಸಮಾಜದ ಹಿರಿಯ ಮುಖಂಡ ಶಂಕರ ಬಿದರಿ ಪ್ರಕಟಿಸಿದರು.
    ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಹೇಳಿದರು.
    ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಬಿ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು.
    ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.
    ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅನುಪಮವಾದ್ದು ಎಂದು ತಿಳಿಸಿದ ಅವರು, ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನರು ತೀವ್ರ ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವುದಾಗಿ ಹೇಳಿದರು.
    ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.
    ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಇದ್ದು, ಭವನ ಇಲ್ಲದ ಜಿಲ್ಲೆಗಳಲ್ಲಿ ಭವನ ನಿರ್ಮಾಣ ಮಾಡಲೂ ಶ್ರಮಿಸುವುದಾಗಿ, ಈ ಭವನದಲ್ಲಿ ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು ಎಂದರು.
    ಪಂಚಾಚಾರ್ಯರ, ಜಗದ್ಗುರುಗಳ, ಮಠಾಧಿಪತಿಗಳ, ಹರ, ಚರ ಗುರು ಮೂರ್ತಿಗಳ, ವಿರಕ್ತರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ ಈಶ್ವರ ಖಂಡ್ರೆ, ಒಗ್ಗಟ್ಟಿನಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂದ ಅವರು, ಎಲ್ಲ ಜಾತಿ, ಜನಾಂಗದವರನ್ನೂ ಜೊತೆಯಲ್ಲಿ ತೆಗೆದುಕೊಂಡು ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

    Verbattle
    Verbattle
    Verbattle
    ನ್ಯಾಯ Bengaluru ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ. ಸುರೇಶ್ ಚುಚ್ಚುಮಾತು
    Next Article ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_rqSi on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Glennhof on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • 555win on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.