ವಿಜಯಪುರ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ವಿಜಾಪುರ ಜಿಲ್ಲೆಯ ಚಡಚಣಕ್ಕೂ ವ್ಯಾಪಿಸಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್ ಹಾಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕೇಂದ್ರದ ಎನ್ ಡಿ ಎ ನೇತೃತ್ವದ ಸರ್ಕಾರ ಇಡಿ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಸಂಚು ರೂಪಿಸಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
ನಂತರ ನಿಯೋಗದಲ್ಲಿ ತೆರಳಿ ತಹಶಿಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು