ಬೆಳಗಾವಿ, ಡಿ.06 : ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ನೆರೆಯ ತೆಲಂಗಾಣದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಹೀಗಾಗಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿಲ್ಲ.ಈ ವಿಷಯ ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿಸಿತು.
ಅದರಲ್ಲೂ ತೆಲಂಗಾಣದ ಚುನಾವಣಾ ಪ್ರಚಾರದ ವೇಳೆ ಅವರ ವಿಧಾನಸಭೆ ಸ್ಪೀಕರ್ ಕುರಿತಾದ ಹೇಳಿಕೆ ವಿವಾದ ಸೃಷ್ಟಿಸಿದೆ.ಪ್ರತಿಪಕ್ಷಗಳು ಅವರನ್ನು ಸದನ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿರುವುದು ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಗದ್ದಲಕ್ಕೆ ಕಾರಣವಾಗಿದೆ.
ಪರಿಷತ್ತಿನಲ್ಲಿ ಇವರ ಗೈರು ಹಾಜರಿ ಪ್ರಸ್ತಾಪಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸ್ವಲ್ಪ ಸಚಿವ ಜಮಿರ್ ಅಹ್ಮದ್ ಖಾನ್ ಗೆ ಮುಖ ತೋರಿಸಲು ಹೇಳಿ ಕಲಾಪಕ್ಕೆ ಬರುತ್ತಿಲ್ಲ ಎಂದು ಆಡಳಿತ ಪಕ್ಷದ ಮುಖ್ಯ ಸಚೇತಕರಿಗೆ ಹೇಳಿದರು
ಜಮೀರ್ ಹೆಸರು ಪ್ರಸ್ತಾಪ ಆಗುತ್ತಿದ್ದಂತೆ ಬಿಜೆಪಿ ಸದಸ್ಯರು ಗದ್ದಲ ಸೃಷ್ಟಿಸಿದರು.
ಜಮೀರ್ ಅವರಿಗೆ ಸ್ಪೀಕರ್ ಸ್ಥಾನದ ಮೇಲೆ ವಿಶ್ವಾಸ ಇಲ್ಲ,ಸ್ಪೀಕರ್ ಸ್ಥಾನಕ್ಕೆ ಧರ್ಮದ ಲೇಪನ ಮಾಡಿ ಮಾತನಾಡಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಗೌರವ ಇಲ್ಲ ಅಂತಾ ಅವರು ಬಂದಿಲ್ವಾ ಎಂದು ಕೋಟ ಶ್ರೀನಿವಾಸ್ ಪೂಜಾರಿ ಪ್ರಶ್ನಿಸಿದರು.
ರಘುನಾಥ್ ರಾವ್ ಮಲ್ಕಾಪುರೆ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಯಾವ ಕಾರಣಕ್ಕೆ ಗೈರು ಹಾಜರಾಗಲು ತಮ್ಮ ಅನುಮತಿ ಕೇಳಿದ್ದಾರೆ ಸದನ ನಡೆಯುವ ಸಂದರ್ಭದಲ್ಲಿ ಯಾರಿಗಾದರೂ ಅಪ್ಪಣೆ ಪಡೆಯುವಾಗ ಸೂಕ್ತ ಕಾರಣ ಬೇಕು. ಅವರ ಹೇಳಿಕೆ, ನಡವಳಿಕೆ ನೋಡಿದರೆ ಉದ್ದೇಶಪೂರ್ವಕವಾಗಿ ಸದನದಿಂದ ದೂರ ಉಳಿಯುತ್ತಿದ್ದಾರೆ. ತಮಗೆ ಜಮೀರ್ ಅಹ್ಮದ್ ಖಾನ್ ಕೊಟ್ಟ ಪತ್ರ ಸಭಾಪತಿಗಳು ಬಹಿರಂಗವಾಗಿ ಓದಲಿ ಎಂದು ಹೇಳಿದರು.
1 Comment
фоновое озвучивание помещений фоновое озвучивание помещений .