Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    Trending

    ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News

    vartha chakraBy vartha chakraOctober 3, 202325 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3 – ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಲಿಂಗಾಯತ ಸಮುದಾಯದ ಅಧಿಕಾರಿಗಳು ಮೂಲೆ ಗುಂಪಾಗಿದ್ದಾರೆ ಎಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ರಾಜ್ಯದಲ್ಲಿ ಭಾರಿ ಚರ್ಚೆಗೆ‌ ಗ್ರಾಮವಾಗಿದೆ.
    ಸರ್ಕಾರಿ ಅಧಿಕಾರಿಗಳ ಬಗ್ಗೆ ಜಾತಿ ಆಧಾರದ ಮೇಲೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪನವರು ಮಾತನಾಡಿರುವುದು ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಶ್ಯಾಮನೂರು ಶಿವಶಂಕರಪ್ಪ ಅವರು ಮಾಹಿತಿ ಕೊರತೆಯಿಂದ ಲಿಂಗಾಯಿತ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗೆ ಹುದ್ದೆಗೆ ನಿಯೋಜಿಸಿಲ್ಲ. ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ. ಲಿಂಗಾಯಿತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ.
    ಜಾತಿ ಆಧಾರದ ಮೇಲೆ ಹುದ್ದೆ ಕೊಡಲಾಗುವುದಿಲ್ಲ. ಎಲ್ಲ ಜಾತಿಯಲ್ಲೂ ಅರ್ಹರು, ಅನರ್ಹರು ಇರುತ್ತಾರೆ. ಅರ್ಹತೆ ಆಧಾರದ ಮೇಲೆ ಅಧಿಕಾರಿಗಳಿಗೆ ಹುದ್ದೆ ನೀಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಲಿಂಗಾಯಿತರಿಗೆ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪುವುದಿಲ್ಲ ಎಂದು ಹೇಳಿದರು ಅಧಿಕಾರಿಗಳನ್ನು ಜಾತಿಯ ದೃಷ್ಟಿಯಿಂದ ನೋಡಬಾರದು. ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುತ್ತಲೇ ಈ ಅಂಕಿಅಂಶಗಳನ್ನು ನೀಡಿದರು.

     

    ತಮ್ಮ ಸಂಪುಟದಲ್ಲಿ ಏಳು ಲಿಂಗಾಯಿತರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂಗಾಯಿತ ಸಮುದಾಯದ ಮೂವರು ಜಿಲ್ಲಾಕಾರಿಗಳು, 7 ಎಸ್ಪಿಗಳು, 13 ವಿಶ್ವವಿದ್ಯಾನಿಲಯದ ಕುಲಪತಿಗಳು, ನಾಲ್ವರು ಸಿಇಒಗಳು ಹಾಗೂ ಮುಖ್ಯ ಇಂಜಿನಿಯರ್‍ಗಳು ಇದ್ದಾರೆ ಎಂದು ಮಾಹಿತಿ ನೀಡಿದರು.
    ಸಾಮಾಜಿಕ ನ್ಯಾಯದ ಮೇಲೆ ಬಸವ ತತ್ವ ಅವಲಂಬಿತವಾಗಿರುವುದರಿಂದ ಸಿದ್ದರಾಮಯ್ಯ ಅವರು ಬಸವ ತತ್ವದ ಅನುಯಾಯಿ ಆಗಿದ್ದಾರೆ.

    ಮೊದಲ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕಲು ಆದೇಶ ನೀಡಿದರು. ಹಿಂದೆ ಮುಖ್ಯಮಂತ್ರಿಯಾಗಿದ್ದ ಲಿಂಗಾಯಿತ ಸಮುದಾಯದವ ರಾರು ಕೂಡ ಈ ಕಾರ್ಯ ಮಾಡಿರಲಿಲ್ಲ. ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರನ್ನು ನಾಮಕರಣ ಮಾಡಲಾಗಿದೆ.
    ಕಲ್ಬುರ್ಗಿ ವಿವಿಗೆ ಬಸವೇಶ್ವರರ ಹೆಸರನ್ನು ಇಡಬೇಕೆಂಬ ಪ್ರಯತ್ನ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದನ್ನು ಕಾರ್ಯಗತ ಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರು ಲಿಂಗಾಯಿತ ವಿರೋಧಿಯಾಗಿದ್ದರೆ ಇವೆಲ್ಲ ಮಾಡಲು ಸಾಧ್ಯವಾದೀತೆ? ತುಳಿತಕ್ಕೊಳಗಾದವರ ಬಗ್ಗೆ ಅವರಲ್ಲಿ ಮೃದು ಧೋರಣೆಯಿದೆ. ಅಧಿಕಾರಿಗಳನ್ನು ಜಾತಿ ಆಧಾರದ ಮೇಲೆ ಗುರುತಿಸುವ, ಹುದ್ದೆ ನೀಡುವ ಕಾರ್ಯ ಸರಿಯಲ್ಲ. ಇದು ಅವರ ನೈತಿಕತೆ ಕುಗ್ಗಿಸುವ ಜೊತೆಗೆ ಆಡಳಿತದ ಮೇಲೂ ಪರಿಣಾಮ ಉಂಟಾಗುತ್ತದೆ ಎಂದು ಒತ್ತಿ ಹೇಳಿದರು.
    ಸರ್ಕಾರದ ಬಗ್ಗೆ ಲಿಂಗಾಯಿತ ಶಾಸಕರಲ್ಲಿ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಹೇಳಿದಂತೆ ಬಹುಮತವುಳ್ಳ ನಮ್ಮ ಸರ್ಕಾರ ಏನೂ ಆಗುವುದಿಲ್ಲ. ಪಕ್ಷದಲ್ಲಿ ಯಾವುದೇ ರೀತಿಯ ಸಮಸ್ಯೆ ಗೊಂದಲವಿಲ್ಲ. ಆಂತರಿಕ ಪ್ರಜಾಪ್ರಭುತ್ವ ಪಕ್ಷದಲ್ಲಿ ಜಾಸ್ತಿ ಇರುವುದರಿಂದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿ ಪರವಾಗಿ ಆಗಲಿ ಅಥವಾ ಶ್ಯಾಮನೂರು ಶಿವಶಂಕರಪ್ಪ ಅವರ ವಿರುದ್ದವಾಗಿ ಮಾತನಾಡುತ್ತಿಲ್ಲ. ಶಾಸಕನಾಗಿ ಜಾತಿ ಆಧಾರದ ಮೇಲೆ ಮಾತನಾಡಬಾರದು ಎಂದರು.

    Verbattle
    Verbattle
    Verbattle
    Congress Government Karnataka Karnataka Congress karnataka news News Politics Trending ಕಾಂಗ್ರೆಸ್ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | Free Education
    Next Article ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jogrlu on ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    • Glennhof on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • LeonardReawn on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.