ಮೈಸೂರು,ಜ.22: ಸದಾ ಒಂದಲ್ಲ ಒಂದು ವಿವಾದದಲ್ಲಿ ಸಿಲುಕುವ ಮೂಲಕ ಸುದ್ದಿಯಾಗುವ ಮೈಸೂರು -ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ (Pratap Simha) ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ನಾಗರೀಕರ ಕೆಂಗಣ್ಣಿಗೆ ಗುರಿಯಾಗಬೇಕಾದ ಘಟನೆ ನಡೆದಿದೆ.
ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಮೈಸೂರು ತಾಲೂಕು ಹಾರೋಹಳ್ಳಿಯ ರೈತರಾದ ರಾಮದಾಸ್ ಎಂಬುವರ ಜಮೀನಿನಲ್ಲಿ ರಾಮ ಮಂದಿರ ಸ್ಥಾಪನೆಗೆ ಶಿಲನ್ಯಾಸ ನೆರವೇರಿಸಲಾಯಿತು.
ದೇವಾಲಯ ನಿರ್ಮಾಣಕ್ಕಾಗಿ ಪೂಜೆ ನಡೆಯುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಸಂಸದ ಪ್ರತಾಪ ಸಿಂಹ ತಮ್ಮ ಬೆಂಬಲಿಗರಾದ ಕೆಲವರೊಂದಿಗೆ ಸ್ಥಳಕ್ಕೆ ಆಗಮಿಸಿತು.
ವಿಗ್ರಹದ ಶಿಲೆ ಸಿಕ್ಕ ಸ್ಥಳದಲ್ಲಿ ನಡೆಯುತ್ತಿದ್ದ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದರು ಪೂಜೆಯ ಸ್ಥಳಕ್ಕೆ ಪ್ರತಾಪ ಸಿಂಹ ಆಗಮಿಸಿದಾಗ, ಸಮಾಜದ ಸಾಮರಸ್ಯವನ್ನು ಹಾಳುಮಾಡುವ ನೀವು ದಲಿತರ ಜಮೀನಿನಲ್ಲಿ ಆಯೋಜಿಸಿರುವ ರಾಮನ ಪೂಜೆಯಲ್ಲಿ ಭಾಗವಹಿಸಬೇಡಿ’ ಎಂದು ತಾಕೀತು ಮಾಡಿದರು.ಹಾರೋಹಳ್ಳಿ ಗ್ರಾಮದಲ್ಲಿ ಎಲ್ಲಾ ಜಾತಿ ಜನಾಂಗದವರು ಸಾಮರಸ್ಯದಿಂದ ಇದ್ದೇವೆ. ಅದನ್ನು ಕದಡುವ ಕೆಲಸ ಮಾಡಬೇಡಿ’ ಎಂದು ಹೇಳಿದರು
ಆದರೂ ಇದನ್ನು ಲೆಕ್ಕಿಸದೆ ಸಂಸದ ಪ್ರತಾಪ್ ಸಿಂಹ ಅವರು ಪೂಜೆ ನಡೆಯುವ ಸ್ಥಳಕ್ಕೆ ಧಾವಿಸಿ ಪೂಜೆಯಲ್ಲಿ ಪಾಲ್ಗೊಳ್ಳಲು ಮುಂದಾದರು ಇದಕ್ಕೆ ಅಡ್ಡಿ ಪಡಿಸಿದ ಸ್ಥಳೀಯರುಪ್ರತಾಪ್ ಸಿಂಹ ಅವರಿಗೆ ಧಿಕ್ಕಾರ ಕೂಗಿದರು. ಘೇರಾವ್ ಹಾಕಿದರು.
ಪೂಜಾ ಕಾರ್ಯಕ್ರಮಕ್ಕೆ ಬರದಂತೆ ಅಡ್ಡಗಟ್ಟಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮರು ಮಾತನಾಡದ ಸಂಸದ ಪ್ರತಾಪಸಿಂಹ ಸ್ಥಳದಿಂದ ಕಾರಿನಲ್ಲಿ ತೆರಳಿದರು
ಇದಾದ ನಂತರ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ ಅವರುಯಾರೋ ನಾಲ್ಕು ಜನ ಮಹಿಷನ ಭಕ್ತರಿದ್ದಾರೆ. ಚಾಮುಂಡಿ ತಾಯಿಯ ಭಕ್ತರು ಕೋಟ್ಯಾಂತರ ಮಂದಿ ಇದ್ದಾರೆ. ನಾನು ಚಾಮುಂಡಿಯ ಭಕ್ತ. ನನ್ನನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ನವರಿಂದ ಸೋಲಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಗಲಾಟೆಗಳು ಮುಂದೆನೋ ನಡೆಯುತ್ತೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಹೇಳಿದರು.

