ಬೆಂಗಳೂರು – ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಮತ್ತು ಸಹಕಾರ ಮಂತ್ರಿ ಎಸ್.ಟಿ.ಸೋಮಶೇಖರ್ ಇದೀಗ ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ.
ಅಕ್ರಮ ಅರೋಪದಡಿ ಇವರ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದರಿಂದ ಕೋರ್ಟ್ ಆದೇಶದ ನಂತರ ಸಕ್ರಿಯಗೊಂಡಿರುವ ಲೋಕಾಯುಕ್ತ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಕರಣವೊಂದು ದಾಖಲಾದಂತಾಗಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆಯ ಕಾಮಗಾರಿಯೊಂದರ ಗುತ್ತಿಗೆ ನೀಡಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಅವರ ಮಗ ಬಿ.ವೈ. ಬಿಜಯೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಲಂಚ ಪಡೆದ ಆರೋಪ ಮಾಡಿದ್ದಾರೆ.
ಈ ಸಂಬಂಧ ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ ಇದನ್ನು ವಿಚಾರಣೆ ನಡೆಸುತ್ತಿರುವ ಕೋರ್ಟ್ ಲೋಕಾಯುಕ್ತಕ್ಕೆ ತನಿಖೆ ನಡೆಸಲು ಸೂಚಿಸಿದೆ ಅದರಂತೆ ಇದೀಗ ಎಫ್ಐಆರ್ ದಾಖಲಾಗಿದೆ.ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ ಶ್ರೀ, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಂ, ಐಎಎಸ್ ಅಧಿಕಾರಿ ಡಾ.ಜಿ.ಸಿ. ಪ್ರಕಾಶ್, ಕೆ. ರವಿ ಮತ್ತು ಯಡಿಯೂರಪ್ಪ ಅವರ ಮತ್ತೊಬ್ಬ ಅಳಿಯ ವಿರುಪಾಕ್ಷಪ್ಪ ಯಮಕನಮರಡಿ ಅವರನ್ನು ಎಫ್ಐಆರ್ ನಲ್ಲಿ ಹೆಸರಿಸಲಾಗಿದೆ.