ಬೆಂಗಳೂರು, ಅ.22:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪElection ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು.
ರಾಜೀನಾಮೆ ಅಂಗೀಕಾರವಾಗಿದೆ ಎಂದು ಸಭಾಧ್ಯಕ್ಷರು ಪ್ರಕಟಿಸಿದೆ ಬಳಿಕ ಮಾತನಾಡಿದ ಅವರು, ಈ ಚುನಾವಣೆಯಲ್ಲಿ
ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದೇನೆ. ಈ ಭಾಗದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಹೇಳಿದರು.
‘ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಈ ಕ್ಷಣದವರೆಗೆ ನಿರ್ಧರಿಸಿಲ್ಲ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ನಾಳೆ ನಮ್ಮ ಕಾರ್ಯಕರ್ತರ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸಲು ನನ್ನ ಮೊದಲ ಆದ್ಯತೆ. ಕಾಂಗ್ರೆಸ್ ಬಗ್ಗೆ ಯೋಚಿಸಿಲ್ಲ. ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ’ ಎಂದು ತಿಳಿಸಿದರು.
ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುಕೂಲವಾಗಲೆಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ತಿಳಿಸಿದರು.
‘ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಅವರ ಕ್ಷೇತ್ರವಾಗಿರುವುದರಿಂದ ಅವರ ಒಪ್ಪಿಗೆಯೂ ಬೇಕಾಗುತ್ತದೆ. ಇನ್ನೂ 2-3 ದಿನಗಳ ಅವಕಾಶವಿದೆ. ಜನರ ಮಧ್ಯ ಇರಬೇಕು. ಜನ ಸೇವೆ ಮಾಡಲು ಬಯಸಿದ್ದೇನೆ’ ಎಂದು ಹೇಳಿದರು.
ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾವು ಪರಸ್ಪರ ವಿರೋಧಿಸಿಕೊಂಡೇ ಬೆಳೆದವರು. ಇದಕ್ಕೆ ಜೆಡಿಎಸ್ ಕಾರ್ಯಕರ್ತರ ವಿರೋಧ ಕೂಡ ಇದೆ’ ಎಂದರು.
Previous Articleಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
Next Article 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು