Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.
    ರಾಜಕೀಯ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    vartha chakraBy vartha chakraJuly 7, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.6:
    ಅಧಿಕಾರ ಹಸ್ತಾಂತರಕ್ಕೆ ತೀರ್ಮಾನ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ವರ್ಗಾವಣೆ ಮಾಡಲು ಸಿದ್ಧತೆ ನಡೆಸಿದೆ ಎಂಬ ವರದಿಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
    ಇದನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಮುಖ್ಯಮಂತ್ರಿ ಕಚೇರಿ, ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.
    ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಹೊಸ ರೂಪ ನೀಡುವ ದೃಷ್ಟಿಯಿಂದ ಎಐಸಿಸಿ ಸಲಹಾ ಸಮಿತಿಯನ್ನು ರಚನೆ ಮಾಡಿದೆ ಈ ಸಮಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಅವಕಾಶ ನೀಡಿದೆ ಬದಲಾಗಿ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಿಲ್ಲ ಎಂದು ತಿಳಿಸಿದೆ.
    ಸಲಹಾ ಸಮಿತಿಯ ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ ಈ ಸಭೆಯಲ್ಲಿ ಸಮಿತಿಯ ಸದಸ್ಯರ ಜೊತೆಗೆ ಹಿಂದುಳಿದ ವರ್ಗಗಳಿಗೆ ಸೇರಿದ ಪಕ್ಷದ ಶಾಸಕರು ಮತ್ತು ಸಂಸದರು ಕೂಡ ಪಾಲ್ಗೊಳ್ಳುತ್ತಿದ್ದಾರೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದೆ.
    ಗೊತ್ತಿಲ್ಲ:
    ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ತಮಗೆ ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ಗೊತ್ತಿಲ್ಲ. ಓಬಿಸಿ ಸಮುದಾಯಗಳ ಸಭೆ ಮಾಡಿ ಎಂದು ಎಐಸಿಸಿಯ ಓಬಿಸಿ ಘಟಕದ ಅಧ್ಯಕ್ಷರು ಸೂಚನೆ ನೀಡಿದರು. ಅದರಂತೆ 15 ರಂದು ಕರ್ನಾಟಕದಲ್ಲಿ ರಾಷ್ಟ್ರೀಯ ಸಭೆ ನಿಗದಿ ಮಾಡಿದ್ದೇನೆ ಎಂದರು.
    ಎಐಸಿಸಿ ಹುದ್ದೆ ಕೊಟ್ಟಾಗ ಅದನ್ನು ಬಿಟ್ಟು ಓಡಿಹೋಗಲು ಸಾಧ್ಯವಿಲ್ಲ. ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ. ನನ್ನನ್ನು ಸಂಚಾಲಕನನ್ನಾಗಿ ಮಾಡಲಾಗಿದೆಯೋ ಅಥವಾ ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ತಿಳಿಯದೆ ತಾವು ಪ್ರತಿಕ್ರಿಯಿಸುವುದಿಲ್ಲ. ಹೈಕಮಾಂಡ್‌ ಜೊತೆ ಚರ್ಚೆ ಮಾಡುತ್ತೇನೆ. ತಾವು ಯಾವುದೇ ಹುದ್ದೆಯನ್ನೂ ಕೇಳಿರಲಿಲ್ಲ ಎಂದು ಹೇಳಿದರು.
    ಹೋಗುವುದಿಲ್ಲ:
    ಮತ್ತೊಂದೆಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಸಿದ್ದರಾಮಯ್ಯ ಅವರನ್ನು ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿಗೆ ಸಂಚಾಲಕರನ್ನಾಗಿ ನೇಮಕ ಮಾಡಿದೆ. ಹಾಗೆಂದ ಮಾತ್ರಕ್ಕೆ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ವರ್ಗಾಯಿಸಲಾಗುತ್ತಿದೆ ಎಂದು ವ್ಯಾಖ್ಯಾನಿಸುವುದು ತಪ್ಪು ಎಂದು ಹೇಳಿದರು.
    ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದಾರೆ ಅವರ ಅಭಿವೃದ್ಧಿ ಕುರಿತಂತೆ ವಿಶೇಷವಾದ ತಿಳುವಳಿಕೆ ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಅವರ ಸೇವೆಯನ್ನು ಬಳಸಿಕೊಳ್ಳಲು ಮುಂದಾಗಿದೆ ಇದಕ್ಕೆ ವಿಶೇಷ ಅರ್ಥ ಕಲ್ಪಸಬೇಕಾಗಿಲ್ಲ ಎಂದರು.
    ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಹುದ್ದೆ ದೊರೆತ ಕೂಡಲೇ ಮುಖ್ಯಮಂತ್ರಿ ಸ್ಥಾನ ತೊರೆಯುತ್ತಾರೆ ಎಂದು ಹೇಳುವುದು ತಪ್ಪು ಹೈಕಮಾಂಡ್ ಆ ರೀತಿ ಯಾವುದೇ ಯೋಚನೆಯನ್ನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
    ಸುರ್ಜೇವಾಲ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಪಕ್ಷ ಸಂಘಟನೆ ಸೇರಿದಂತೆ ಹಲವಾರು ವಿಚಾರಗಳ ಕುರಿತಂತೆ ಚರ್ಚಿಸಲು ಆಗಿಂದಾಗ್ಗೆ ಬೆಂಗಳೂರಿಗೆ ಬರುತ್ತಿರುತ್ತಾರೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ತಿಳಿಸಿದರು.
    ಹಸ್ತಾಂತರ:
    ಈ ನಡುವೆ ಕಾಂಗ್ರೆಸ್ ವಲಯದಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು ಇದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯ ಆರಂಭ ಎಂದು ಬಣ್ಣಿಸಿದ್ದಾರೆ.
    ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ ಎಂದು ಹೇಳಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಿದ್ದರಾಮಯ್ಯ ಅವರಿಗೆ ಸ್ವಾಭಿಮಾನ ವಿದ್ದರೆ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
    ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಅವರು ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜು ಮಾಡುತ್ತಿದ್ದಾರೆ ಎಂದು ತಿಳಿಸಿದರು
    ಸುರ್ಜೇವಾಲ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಸಿದ್ದರಾಮಯ್ಯರನ್ನು ದೆಹಲಿಗೆ ಕಳುಹಿಸಲು ಕಾಂಗ್ರೆಸ್ ನಲ್ಲಿ ವೇದಿಕೆ ಸಿದ್ಧವಾಗಿದೆ. ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಹೇಳಿದರು.
    ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದು, ಸದ್ಯದಲ್ಲೇ ಸಿಎಂ ಸ್ಥಾನ ಪಲ್ಲಟ ಆಗುತ್ತದೆ. ಇದಕ್ಕಾಗಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಓಬಿಸಿ ಸಮಿತಿಗೆ ಅಧ್ಯಕ್ಷರಾಗಿ ಮಾಡಿದ್ದಾರೆ. ಇದರ ಅರ್ಥ ಸಿದ್ದರಾಮಯ್ಯ ದೆಹಲಿಗೆ ಶಿಫ್ಟ್ ನಿಶ್ಚಿತ ಎಂದರು.
    ಸಿದ್ದರಾಮಯ್ಯ ಅವರನ್ನು ರಾಷ್ಟ್ರರಾಜಕಾರಣಕ್ಕೆ ಕರೆಸಿಕೊಂಡು, ಸಿಎಂ ಖುರ್ಚಿಯಿಂದ ಕೆಳಗಿಳಿಸುವ ಯೋಜನೆ ಇದಾಗಿದೆ. ಪ್ರಮೋಷನ್ ಮಾಡಿ, ಡಿಮೋಷನ್ ಮಾಡುವ ತಂತ್ರಗಾರಿಕೆ ಇದು’ ಎಂದರು.

    ಕರ್ನಾಟಕ ಕಾಂಗ್ರೆಸ್ ಬಿಜೆಪಿ Bengaluru ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.
    Next Article ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ
    vartha chakra
    • Website

    Related Posts

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • where can i buy generic exforge on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • GregoryKax on ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • vivodchelyabinskvucky on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe