Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    ರಾಷ್ಟ್ರೀಯ

    ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

    vartha chakraBy vartha chakraFebruary 6, 2023Updated:March 20, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6-

    ಭಾರತ ಇಂಧನ ಕ್ಷೇತ್ರ (Energy Sector) ದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಇಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಉದ್ಯಮಿಗಳು ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಲು ಮುಂದೆ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ನೀಡಿದರು. ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (International Exhibition Centre) ದಲ್ಲಿ ಆರಂಭವಾದ ಭಾರತೀಯ ಇಂಧನ ಸಪ್ತಾಹ (India Energy Week) ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತದಲ್ಲಿ ಹೂಡಿಕೆಗೆ ಮುಕ್ತ ಅವಕಾಶಗಳಿವೆ’ ಎಂದು ಹೇಳಿದರು. ‘ಈವರೆಗೂ ನಿರ್ಬಂಧಿತವಾಗಿದ್ದ ಹತ್ತು ಲಕ್ಷ ಚದರ ಕಿಲೋಮೀಟರ್ ಪ್ರದೇಶವನ್ನು ಹೂಡಿಕೆ ಚಟುವಟಿಕೆಗಳಿಗೆ ಮುಕ್ತಗೊಳಿಸಲಾಗಿದೆ. ಹಸಿರು ಇಂಧನ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಹೂಡಿಕೆದಾರರು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು’ ಎಂದರು.

    ‘ದೇಶದಲ್ಲಿ ಈಗ ಸ್ಥಿರವಾದ ಸರ್ಕಾರ ಇದೆ. ಗಟ್ಟಿಯಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕೆಳಸ್ತರದ ಜನರ ಜೀವನಮಟ್ಟ ಸುಧಾರಣೆಗೆ ಪೂರಕವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ದೇಶವು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದೆ’ ಎಂದು  ಹೇಳಿದರು. ಮುಂದಿನ ದಿನಗಳಲ್ಲಿ ಎಲ್ ಪಿ ಜಿ (LPG) ಬೇಡಿಕೆ ಶೇಕಡ 600ರಷ್ಟು ಹೆಚ್ಚಲಿದೆ. ಅದಕ್ಕೆ ಪ್ರತಿಯಾಗಿ ಇಂಧನ ಮೂಲಗಳ ಶೋಧ ಮತ್ತು ಉತ್ಪಾದನೆ ಹೆಚ್ಚಿಸಬೇಕಿದೆ. ಹೂಡಿಕೆದಾರರು ಈ ಕ್ಷೇತ್ರದಲ್ಲಿ ಹೂಡಿಕೆಗೆ ಯೋಚಿಸಬೇಕು ಎಂದರು. ತಮ್ಮ 30 ನಿಮಿಷಗಳ ಭಾಷಣದಲ್ಲಿ ಇಂಧನ ಕ್ಷೇತ್ರ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಭಾರತ ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಥೆಯನ್ನು ಉದ್ದಿಮೆದಾರರ ಮುಂದಿಟ್ಟ ಅವರು ‘ವಿದ್ಯುತ್ ಪೂರೈಕೆಯಲ್ಲಿ ಸಮಗ್ರ ಸುಧಾರಣೆ ತರುವುದಕ್ಕಾಗಿ ಒಂದು ದೇಶ – ಒಂದು ವಿತರಣಾ ಜಾಲ ಯೋಜನೆಯನ್ನು ರೂಪಿಸಲಾಗಿದೆ. ಅದಕ್ಕಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿ‌ನ ಒತ್ತು ನೀಡಲಾಗಿದೆ’ ಎಂದರು.

    ‘ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುತ್ತಿದ್ದೇವೆ. ಇಲ್ಲಿ ಸ್ಟಾರ್ಟಪ್‍ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ. ನಮ್ಮ ಒನ್ ನೇಷನ್, ಒನ್ ಗ್ರಿಡ್ (One Nation, One Grid) ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ’ ಎಂದು ತಿಳಿಸಿದರು. ‘ಭಾರತದ ಅಭಿವೃದ್ಧಿಯ ವೇಗವನ್ನು ಗಮನಿಸಿದರೆ ಮುಂದಿನ ವರ್ಷಗಳಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ ಎಂದು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯೇ ಹೇಳಿದೆ. ದೇಶದಲ್ಲಿ ಇಂಧನದ ಬೇಡಿಕೆಯು ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ನಿಮ್ಮಂಥ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಭಾರತದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿವೆ’ ಎಂದು ಆಶ್ವಾಸನೆ ನೀಡಿದರು.

    ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ ಸ್ತಂಭಗಳಿವೆ. ದೇಶೀಯ ಉತ್ಪಾದನೆಯ ಹೆಚ್ಚಳ, ಪೂರೈಕೆಯಲ್ಲಿ ವೈವಿಧ್ಯ, ಜೈವಿಕ ಇಂಧನ, ಸೋಲಾರ್‍ನಂಥ ಪರ್ಯಾಯ ಇಂಧನ ಬಳಕೆಯಲ್ಲಿ ವೃದ್ಧಿ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು. ‘ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದೆನಿಸಿದೆ’ ಎಂದು ಹೇಳಿದರು.

    ‘IMF 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (A bright spot) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ’ ಎಂದರು.

     

    ಚಿತ್ರಗಳ ಕೃಪೆ – ಅಂತರ್ಜಾಲ

    Verbattle
    Verbattle
    Verbattle
    #narendramodi Bangalore BJP CEN energy sector Energy week india ITI LPG m modi narendra modi national News petroleum ತಂತ್ರಜ್ಞಾನ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleAdani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    Next Article CNG ವಾಹನಗಳಿಗೆ ಹೊಸ ಸುತ್ತೋಲೆ
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    March 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    March 17, 2026

    1 Comment

    1. Cgalqc on March 16, 2026 9:04 am

      De toekomst van casino is Betano. Claim €500 welkomstbonus https://betanogame.org/nl/bonuses/ en ervaar slots en live dealers van topniveau. Uitbetalingen in minuten.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • WilliamSkity on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • WilliamSkity on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.