ಮಡಿಕೇರಿ.
ಕರ್ನಾಟಕದ ಜೀವನದಿ ಕಾವೇರಿ ಅತ್ಯಂತ ಪವಿತ್ರ ನದಿ.ದಕ್ಷಿಣ ಭಾರತದ ಗಂಗೆ ಎಂದೇ ಕರೆಯಲ್ಪಡುವ ಈ ನದಿಯ ಉಗಮ ಸ್ಥಾನ ಮತ್ತು ತ್ರಿವೇಣಿ ಸಂಗಮದ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಪೊನ್ನಣ್ಣ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೋಲಿಸ್ ಮತ್ತು ಭಗಂಡೇಶ್ವರ ದೇವಾಲಯ ಆಡಳಿತ ಮಂಡಳಿಗೆ ತಾಕೀತು ಮಾಡಿದ್ದಾರೆ.
ಅಧಿಕಾರಿಗಳೊಂದಿಗೆ ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಯ ಸಂಧರ್ಭದಲ್ಲಿ ಪ್ರವಾಸಿಗರು ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿರನ್ನು ಕಂಡು ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು.
ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ಜಲ ಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿಕೊಟ್ಟರು.
ತ್ರಿವೇಣಿ ಸಂಗಮ ಅತ್ಯಂತ ಪವಿತ್ರ ತಾಣ ಇಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗದ ಹಾಗೆ ಸಿಬ್ಬಂದಿಗಳು ಕಾವಲು ಕಾಯುವಂತೆ ನಿರ್ದೇಶನ ನೀಡಿದರು.
ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳುವಳಿಕೆ ಫಲಕ ಅಳವಡಿಸುವಂತೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎಲ್. ಶೋಭಾ ರವರಿಗೆ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾಗಮಂಡಲ ಮತ್ತು ತಲಕಾವೇರಿ ಪೌರಾಣಿಕ ಹಿನ್ನಲೆ ಉಳ್ಳ ಪುಣ್ಯ ಕ್ಷೇತ್ರವಾಗಿದ್ದು b ಯಾವುದೇ ನಡವಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ.
ಮಾಹಿತಿ ಕೊರತೆಯಿಂದ
ಕೆಲ ಪ್ರವಾಸಿಗರಿಂದ ಅಪಚಾರವಾಗುತ್ತಿರುವ
ವಿವರಗಳು ತಮ್ಮ ಗಮನಕ್ಕೆ ಬಂದಿದ್ದು ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತಾವು ಬದ್ದರಿದ್ದೇವೆ ಎಂದು ತಿಳಿಸಿದರು.
Previous Articleಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.
Next Article ದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್ ಗೆ ಬೆದರಿಕೆ ಕರೆ.