ಬೆಂಗಳೂರು,ಸೆ.30- ಕ್ರಿಪ್ಟೋ ಕರೆನ್ಸಿ ಮೇಲಿನ ಕುತೂಹಲವನ್ನೇ ಬಂಡವಾಳ ಮಾಡಿಕೊಂಡು ನ್ನಾಗಿಸಿಕೊಂಡು ಲಾಭ ಗಳಿಸಿಕೊಡುವುದಾಗಿ ಬ್ಯಾಂಕ್ ಖಾತೆ, ಸಿಮ್ ಕಾರ್ಡ್ ಪಡೆದು ವಂಚಿಸುತ್ತಿದ್ದ ಖತರ್ನಾಕ್ ಖದೀಮನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಣ್ಣೂರಿನ ಶಾನೀದ್ ಅಬ್ದುಲ್ ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
ಟೆಲಿಗ್ರಾಂನಲ್ಲಿ ಗ್ರೂಪ್ ಮಾಡಿಕೊಂಡಿದ್ದ ಅರೋಪಿ, ಬೇರೆ ಬೇರೆ ಜನರಿಗೆ ಗ್ರೂಪ್ ಲಿಂಕ್ ಕಳುಹಿಸಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದ.
ಬಳಿಕ ನೀವು ನಿಮ್ಮ ಕರೆಂಟ್ ಅಕೌಂಟಿನ ಡೆಬಿಟ್ ಕಾರ್ಡ್/ಚೆಕ್ ಬುಕ್ ಮತ್ತು ಸಿಮ್ ಕಾರ್ಡ್ ನೀಡಿದರೆ ನಿಮ್ಮ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಿ ಕೊಡುವುದಾಗಿ ನಂಬಿಸುತ್ತಿದ್ದ. ಬಳಿಕ ಅಕೌಂಟಿನಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನ ಬಂಧಿಸಿರುವ ಸಿಇಎನ್ ಪೊಲೀಸರು ಬಂಧಿತನಿಂದ ಬರೋಬ್ಬರಿ 222 ಸಿಮ್ ಕಾರ್ಡ್ಗಳು, 10 ಮೊಬೈಲ್ ಫೋನ್ಗಳು, 10 ಡೆಬಿಟ್ ಕಾರ್ಡ್ಗಳು, ಬ್ಯಾಂಕ್ ಪಾಸ್ ಬುಕ್, ಚೆಕ್ಬುಕ್ಗಳನ್ನ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಪತ್ತೆ ಕಾರ್ಯ ಮುಂದುವರೆದಿದೆ.
ಅಕೌಂಟಿನ ಡೆಬಿಟ್ ಕಾರ್ಡ್/ಚೆಕ್ ಬುಕ್ ಮತ್ತು ಸಿಮ್ ಕಾರ್ಡ್ ನೀಡಿದರೆ ನಿಮ್ಮ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಿ ಕೊಡುವುದಾಗಿ ನಂಬಿಸಿ, ಸಾರ್ವಜನಿಕರನ್ನ ವಂಚಿಸುತ್ತಿದ್ದ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
Previous Articleನಟನಾಗಲು ಬಂದು ಮಸಣ ಸೇರಿದ!
Next Article ಖರ್ಗೆ ಬಿಟ್ಟರೆ ಕಾಂಗ್ರೆಸ್ ಗೆ ಪರ್ಯಾಯವಿಲ್ಲ