ಬೆಂಗಳೂರು,ಜೂ. 3:
ಸಮಾಜ ಸೇವೆ ಮೂಡನಂಬಿಕೆ ವಿರುದ್ಧ ಹೋರಾಟ ಸೇರಿದಂತೆ ಹಲವು ಕಾರಣಗಳಿಂದ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ಮುಕ್ತವಿಶ್ವವಿದ್ಯಾಲಯ ಗೌರವ ಡಿಲಿಟ್ ಪದವಿಗೆ ಆಯ್ಕೆ ಮಾಡಿದೆ. ಆದರೆ ಈ ಪದವಿಯನ್ನು ಸ್ವೀಕರಿಸಲು ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿರುವ ಅವರು, ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಮನಸೋಇಚ್ಛೆ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ
ಈ ಪದವಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ.
ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಹೀಗಾಗಿ ತಮಗೆ ಈ ಗೌರವ ಬೇಡ ಎಂದು ಹೇಳಿದ್ದಾರೆ.
ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾ.27ರಂದು ವಿವಿಯ ಗೌರವ ಡಾಕ್ಟರೇಟ್ ಡಿ.ಲಿಟ್ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ
Previous Articleಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.
Next Article ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ.?