ಬೆಂಗಳೂರು, ಜ. 6 :
ಚೀನಾದಲ್ಲಿ ಭಾರಿ ಆತಂಕಗಳು ಸೃಷ್ಟಿಸುರುವ
ಹೆಚ್ ಎಂ ಪಿ ವಿ ವೈರಸ್ ಲಕ್ಷಣಗಳನ್ನು ಹೊಂದಿರುವ ಎರಡು ಪ್ರಕರಣಗಳು ರಾಜ್ಯದಲ್ಲೂ ಪತ್ತೆಯಾಗಿವೆ.
ಮಾಹಿತಿ ಹೊರಬೀಳುತ್ತಿದ್ದಂತೆ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮತ್ತು ವೈದ್ಯಕೀಯ ಶಿಕ್ಷಣ ಮಂತ್ರಿ ಡಾ.ಶರಣ ಪ್ರಕಾಶ್ ಪಾಟೀಲ್ ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ತುರ್ತು ಸಭೆ ನಡೆಸಿದರು.
ಈ ನಡುವೆ ರೋಗದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಚೀನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು
ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
Previous Articleರಾಜ್ಯ ಕಾಂಗ್ರೆಸ್ಸಿನಲ್ಲಿ ಏನಾಗುತ್ತಿದೆ ಗೊತ್ತಾ
Next Article ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ