ಚಿಕ್ಕಮಗಳೂರು,ನ.12-
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿದೆ ಎಂಬ ಅನುಮಾನಗಳು ತೀವ್ರ ಗೊಂಡಿವೆ ಇದರ ಬೆನ್ನಲ್ಲೇ ತನಿಖೆ ನಡೆಸಿದ ನಕ್ಸಲ್ ನಿಗ್ರಹ ಪಡೆಗೆ ಕೆಲವು ಸಾಕ್ಷಿಗಳು ಲಭ್ಯವಾಗಿದ್ದು ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಠಾಣಾ ವ್ಯಾಪ್ತಿಯ ಕೆಲವು ಮನೆಗಳಿಗೆ ಮನೆಗಳಿಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮತ್ತು ನಕ್ಸಲ್ ನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ಮಾಡಲಾಗಿದೆ.
ಅರಣ್ಯ ಒತ್ತುವರಿ ತೆರವು ಮತ್ತು ಕಸ್ತೂರಿ ರಂಗನ್ ವರದಿ ಸಂಬಂಧ ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಹೀಗಾಗಿ ಗ್ರಾಮದ ಪ್ರತಿ ಮನೆಯಲ್ಲೂ ಪೊಲೀಸರಿಂದ ಶೋಧ ಮಾಡಲಾಗಿದೆ. ರೆ.
ಕಾರ್ಯಾಚರಣೆ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯಲ್ಲಿ 3 ಬಂದೂಕು ಪತ್ತೆಯಾಗಿವೆ. ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಮಾಹಿತಿ ಲಭ್ಯವಾಗಿದೆ.
ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ, ಪರಿಶೀಲನೆ ನಡೆಸಿದರು.
ಉಡುಪಿ ಬಳಿ ನಕ್ಸಲ್ ಶಂಕೆ:
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಮಾಡಿದ್ದರು. ಕೆಲವು ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಎಎನ್ಎಫ್ ಸಿಬ್ಬಂದಿ ಸ್ಥಳೀಯರನ್ನು ವಿಚಾಣೆ ಮಾಡಿದ್ದಾರೆ. ಆದರೆ ಸ್ಥಳೀಯರಿಂದ ಯಾವುದೇ ಮಾಹಿತಿ ದೊರೆತ್ತಿಲ್ಲ ಎಂಬುವುದು ಎಎನ್ಎಫ್ ಮೂಲಗಳು ತಿಳಿಸಿವೆ.
Previous Articleಸುಳ್ಳು ಹೇಳಿದ್ರಾ ಪ್ರಹ್ಲಾದ್ ಜೋಷಿ.?
Next Article ರಕ್ತ ಕಾರಿ ಸಾಯುತ್ತೇನೆ ಎಂದ ಮುನಿರತ್ನ.