ಬೆಂಗಳೂರು,ಮೇ.14:
ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೊನ್ನೆ ನಡೆದ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪಡೆದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನಿ ಅಂಕಿತ ಬಸವರಾಜ್ ಅವರಿಗೆ 5 ಲಕ್ಷ ಬಹುಮಾನ ಮತ್ತು ದ್ವಿತೀಯ ಸ್ಥಾನ ಪಡೆದ ಅವರಿಗೆ ಮಂಡ್ಯದ ನವನೀತ್‌ಗೂ 2 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಣೆ ಮಾಡಿದರು.
ಅಂಕಿತ ಅವರ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ತಮ ಮನೆಗೆ ಕರೆಸಿಕೊಂಡು ಸನ್ಮಾನಿಸಿದ ಡಿ.ಕೆ.ಶಿವಕುಮಾರ್, ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು.ಅದರ ಮೇಲೆ ದಿನಾಂಕವನ್ನು ಖುದ್ದಾಗಿ ತಾವೇ ನಮೂದಿಸಿದರು. ಜೊತೆಗೆ ತಮ್ಮ ಪುತ್ರಿಯಿಂದಲೂ ಸಹಿ ಹಾಕಿಸಿ ಅಂಕಿತಾ ಅವರಿಗೆ ತಲುಪಿಸುವಂತೆ ತಮ ಸಿಬ್ಬಂದಿಗಳಿಗೆ ಸೂಚಿಸಿದರು. ವೈಯಕ್ತಿಕವಾಗಿ 5 ಲಕ್ಷ ರೂ.ಗಳ ಚೆಕ್ ಅನ್ನು ವಿತರಿಸಿದರು.
ಆ ಬಳಿಕ ಮಾತನಾಡಿದ ಅವರು,ನಾನು ಪ್ರವೃತ್ತಿಯಲ್ಲಿ ರಾಜಕಾರಣಿ. ಆದರೆ ಶೈಕ್ಷಣಿಕ ಸೇವೆ ನನ್ನ ಆಯ್ಕೆ. ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಸ್‌ಆರ್ ಅನುದಾನ ಬಳಸಿ ಶಾಲೆಗಳ ನಿರ್ಮಾಣಕ್ಕೆ ಸಹಮತಿ ಸೂಚಿಸಿದ್ದಾರೆ. ಈಗಾಗಲೇ ಸಂಸದ ಡಿ.ಕೆ.ಸುರೇಶ್ ಪ್ರತಿನಿಧಿಸುವ ರಾಮನಗರದಲ್ಲಿ ಈ ರೀತಿಯ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.
ನೀತಿ ಸಂಹಿತೆಯ ಕಾರಣಕ್ಕಾಗಿ ಈವರೆಗೂ ಸಭೆಗಳನ್ನು ಮಾಡಿಲ್ಲ. ಇನ್ನು ಮುಂದೆ ನಿರಂತರವಾಗಿ ಸಭೆಗಳನ್ನು ಮಾಡಿ ಶಾಲೆಗಳ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗುವುದು. ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಅವರ ಫಲಿತಾಂಶ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಮರ್ಥರಿದ್ದಾರೆ, ಶಿಕ್ಷಕರೂ ಸಮರ್ಥರು ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.
ಬಾಗಲಕೋಟೆಯ ಅಂಕಿತಾ 625 ಕ್ಕೆ 625 ಅಂಕ ಗಳಿಸಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ನಾನು ಓದುವಾಗಲೂ ಬಹಳಷ್ಟು ಮಂದಿ ರ್ಯಾಂಕ್ ಪಡೆಯುತ್ತಿದ್ದರು, ಬೆಂಗಳೂರಿನ ಶಾಲೆಗಳಲ್ಲಿ ರ್ಯಾಂಕ್ ಪಡೆಯುವುದು ದೊಡ್ಡ ವಿಷಯವಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರ್ಯಾಂಕ್ ಪಡೆದಿದ್ದು ಶ್ಲಾಘನಾರ್ಹ ಎಂದರು.
Previous Articleರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.
Next Article ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
1 Comment
Clinical data confirm better outcomes in patients whose partners are supportive during use of iverdon plus. Trusted delivery for the moments that matter most.