ಬೆಂಗಳೂರು,ಜು.4:
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ Electionಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲಾಗಿರುವ ನ್ಯಾಯಮೂರ್ತಿ ಭಕ್ತ ವತ್ಸಲ ಆಯೋಗದ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಆದರಿಸಿ ಅಧ್ಯಯನ ನಡೆಸಲು ಬಿಜೆಪಿ ಸರಕಾರದ ಅವಧಿಯಲ್ಲಿ ನ್ಯಾಯಮೂರ್ತಿ ಭಕ್ತ ವತ್ಸಲ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು.
ಈ ವರದಿಯ ಬಗ್ಗೆ ಅಧ್ಯಯನ ನಡೆಸಲು ಸಂಪುಟ ಉಪ ಸಮಿತಿ ರಚಿಸಿದ್ದು ಇದೀಗ ಆ ಸಮಿತಿಯ ವರದಿ ಆಧರಿಸಿ ಭಕ್ತವತ್ತಲ ಆಯೋಗದ ವರದಿಯನ್ನು ತಿರಸ್ಕರಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.
5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025 ರವರೆಗೆ ವಿಸ್ತರಿಸಲು ನಿರ್ಧರಿಸಿದ ಸಭೆ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಿದ್ದು,ಇವುಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾದ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಯಿತು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸಲಿಂಗ್ ಮೂಲಕ ವರ್ಗಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಳಗಾವಿ,ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.
ಇದಕ್ಕಾಗಿ.2000.00 ಕೋಟಿ ಬಿಡುಗಡೆ ಮಾಡಲಾಗುವುದು.
ಇದಕ್ಕೆ ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ. 7.5 ರಷ್ಟು ಮೊತ್ತ ರೂ.150.00 ಕೋಟಿಗಳು ಹಾಗೂ ಯುಐಡಿಎಫ್ ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ರೂ.1700.00 ಕೋಟಿ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗುವುದು.
Previous Articleಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!
Next Article ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.