Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಜಾಬ್ ಪೊಲೀಸ್ ಠಾಣೆ ಮೇಲೆ ಪಾಕ್ ಗ್ರನೇಡ್ ದಾಳಿ
    ಸುದ್ದಿ

    ಪಂಜಾಬ್ ಪೊಲೀಸ್ ಠಾಣೆ ಮೇಲೆ ಪಾಕ್ ಗ್ರನೇಡ್ ದಾಳಿ

    vartha chakraBy vartha chakraDecember 10, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಮೃತಸರ(ಪಂಜಾಬ್​),ಡಿ.10-ರಾಜ್ಯದ ತರ್ನ್ ತರನ್​ನ ಗಡಿ ಪ್ರದೇಶದಲ್ಲಿ ನಿನ್ನೆ ಮಧ್ಯರಾತ್ರಿ ಪೊಲೀಸ್ ಠಾಣೆಯ ಮೇಲೆ ಶಂಕಿತ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
    ತರ್ನ್ ತರನ್ ಜಿಲ್ಲೆಯ ಅಮೃತಸರ- ಭಟಿಂಡಾ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆಗೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸ್ಪೋಟಕ ಅಪ್ಪಳಿಸಿತ್ತು. ಈ ದಾಳಿಯ ಹಿಂದೆ ಪಾಕಿಸ್ತಾನಿ ಉಗ್ರರ ಕೈವಾಡವಿದೆ ಎಂದು ಶಂಕಿಸಲಾಗಿದೆ.
    ಅಪರಿಚಿತ ದಾಳಿಕೋರರು ರಾಕೆಟ್ ಲಾಂಚರ್ ತರಹದ ಸಾಧನವನ್ನು ರಾಷ್ಟ್ರೀಯ ಹೆದ್ದಾರಿ 54ರಿಂದ ಸರ್ಹಾಲಿಯ ಪೊಲೀಸ್ ಠಾಣೆಗೆ ಹಾರಿಸಿದ್ದಾರೆ. ಈ ರಾಕೆಟ್ ದಾಳಿಯಿಂದಾಗಿ ಪೊಲೀಸ್ ಠಾಣೆಯ ಗೋಡೆಗಳು, ಬಾಗಿಲುಗಳ ಗ್ಲಾಸ್​ಗಳು ಒಡೆದು ಹೋಗಿವೆ. ಈ ದಾಳಿಯ ನಂತರ, ತರ್ನ್ ತರನ್​ನ ಎಸ್‌ಎಸ್‌ಪಿ ದಾಳಿ ನಡೆದ ಸ್ಥಳಕ್ಕೆ ಆಗಮಿಸಿ, ದಾಳಿಗೆ ಬಳಸಿದ ರಾಕೆಟ್ ಅನ್ನು ಪೊಲೀಸ್ ಠಾಣೆಯ ಒಳಗಿನಿಂದ ವಶಪಡಿಸಿಕೊಳ್ಳಲಾಯಿತು. ರಾಕೆಟ್ ಜೊತೆಗೆ ಪೈಪ್ ತರಹದ ವಸ್ತು ಕೂಡ ಪತ್ತೆಯಾಗಿದೆ .
    ಸರ್ಹಾಲಿಯು ಕುಖ್ಯಾತ ದರೋಡೆಕೋರ ಹರ್ವಿಂದರ್ ಸಿಂಗ್ ಅಲಿಯಾಸ್ ರಿಂಡಾನ ಊರಾಗಿದೆ. ಆತ ಕೆಲವು ದಿನಗಳ ಹಿಂದೆ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದ ಎಂದು ಶಂಕಿಸಲಾಗಿದೆ. ಹರ್ವಿಂದರ್ ಸಿಂಗ್ ರಿಂಡಾ ಮೂತ್ರಪಿಂಡ ವೈಫಲ್ಯದಿಂದ 15 ದಿನಗಳ ಕಾಲ ಲಾಹೋರ್‌ನ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲಿ ಆತ ನಿಧನನಾಗಿದ್ದಾನೆ.
    ಪಾಕಿಸ್ತಾನದ ಐಎಸ್‌ಐ ಆಶ್ರಯದಲ್ಲಿ ಖಲಿಸ್ತಾನ್ ಬೆಂಬಲಿತ ಭಯೋತ್ಪಾದಕರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.
    ಇದಕ್ಕೂ ಮುನ್ನ ಮೇ 9ರಂದು ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿ ಮೇಲೆ ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್ (ಆರ್‌ಪಿಜಿ) ಬಳಸಿ ದಾಳಿ ನಡೆಸಲಾಗಿತ್ತು. ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸರ ಗುಪ್ತಚರ ಕಚೇರಿಯ 3ನೇ ಮಹಡಿಯಲ್ಲಿ ಕಳೆದ ಡಿ.5ರಂದು ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು 6 ಜನರನ್ನು ಬಂಧಿಸಿದ ಬೆನ್ನಲ್ಲೇ ಈ ಘಟನೆ ನಡೆದಿತ್ತು.
    ಮೊಹಾಲಿ ಸ್ಫೋಟ ಪ್ರಕರಣದಲ್ಲಿ ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಭಾಗಿಯಾಗಿರುವುದನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ವಿಕೆ ಭಾವ್ರಾ ಬಹಿರಂಗಪಡಿಸಿದ್ದರು.
    ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐನ ಸೂಚನೆ ಮೇರೆಗೆ ನಡೆದ ಬಾಂಬ್ ಸ್ಫೋಟದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಮತ್ತು ಸ್ಥಳೀಯ ದರೋಡೆಕೋರರು ಭಾಗಿಯಾಗಿದ್ದಾರೆ ಎಂದು ಪಂಜಾಬ್ ಡಿಜಿಪಿ ಹೇಳಿದ್ದರು.
    ಎರಡು ದಿನಗಳ ಹಿಂದೆಯಷ್ಟೇ ಭಯೋತ್ಪಾದನಾ ದಾಳಿಯ ಬಗ್ಗೆ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ವರದಿಗಳ ಪ್ರಕಾರ, ಪಂಜಾಬ್‌ನ ಪೊಲೀಸ್ ಠಾಣೆಗಳು ಮತ್ತು ಇತರ ಸರ್ಕಾರಿ ಕಟ್ಟಡಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲು ಸೂಚಿಸಲಾಗಿತ್ತು. ಇದೀಗ ಪೊಲೀಸ್ ಠಾಣೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
    ಸಿಪಿ ಲುಧಿಯಾನಾ ಅವರು ಎಲ್ಲಾ ಪೊಲೀಸ್ ಠಾಣೆಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಉನ್ನತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅಂತಹ ಪೊಲೀಸ್ ಠಾಣೆಗಳು ಅಥವಾ ಕಟ್ಟಡಗಳು ದಾಳಿ ಮತ್ತು ಪಲಾಯನ ಮಾಡಲು ಸುಲಭವಾದ ಕಾರಣ ನಗರದ ಹೊರಗೆ ಅಥವಾ ಹೆದ್ದಾರಿಗಳಲ್ಲಿ ಇರುವ ಪೊಲೀಸ್ ಠಾಣೆಗಳಲ್ಲಿ ಹೆಚ್ಚಿನ ಜಾಗರೂಕತೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಉಗ್ರ ಭಯೋತ್ಪಾದಕರು
    Share. Facebook Twitter Pinterest LinkedIn Tumblr Email WhatsApp
    Previous Articleಮೂರ್ತಿ ದಂಪತಿಗಳಿಂದ 7.50 ಕೋಟಿ ರೂ ಕೊಡುಗೆ
    Next Article ಭಯದಿಂದ ತತ್ತರಿಸಿದ ಸಿದ್ದರಾಮಯ್ಯ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • LinwoodGah on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Akucwl on ಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.