ಬೆಂಗಳೂರು Aug 31- ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಕುರಿತಾಗಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದ್ದು ಸೀಟು ಹಂಚಿಕೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.
ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ಸಂಬಂಧ ಸೆ.5ರೊಳಗೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸುವ ಸಾಧ್ಯತೆ ಇದೆ ಎಂದು ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಖಾಸಗಿ ಕಾಲೇಜುಗಳು ಸೆ.4ರ ಒಳಗೆ ಇನ್‌ಟೇಕ್ ವಿವರಗಳನ್ನು ಕೆಇಎ ಗೆ ಸಲ್ಲಿಸಲಿವೆ. ಸೆ.5 ಅಥವಾ 6ರಂದು ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಲಾಗುತ್ತದೆ. ಸೆ.15ರ ವೇಳೆಗೆ ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಆ.24ರಿಂದ 26ರ ವರೆಗೆ ನಡೆದ ವೈದ್ಯಕೀಯ ತಪಾಸಣೆಗೆ ಗೈರು ಹಾಜರಾದ ವಿಕಲಚೇತನ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಸೆ.6ರಂದು ಬೆಂಗಳೂರಿನ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತದೆ. ಅಂದು ಬೆಳಗ್ಗೆ 9 ಗಂಟೆಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಕೆಇಎ ತಿಳಿಸಿದೆ.
Previous Articleನೆಮ್ಮದಿಯ ನಾಳೆಗೆ ಬಿಜೆಪಿ ಬೇಡವಂತೆ
Next Article Apple Box ನ ನಿರ್ಮಾಪಕಿಯಾದ ರಮ್ಯಾ