ಬೆಂಗಳೂರು,ಆ.21-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.
ಪರಿಶಿಷ್ಟ ಸಮುದಾಯಕ್ಕೆ ಸೇರಿದ ರಾಜ್ಯಪಾಲರನ್ನು ಕಾಂಗ್ರೆಸ್ ಕಾರ್ಯಕರ್ತರು ಅವಹೇಳನ ಮಾಡುವ ಮೂಲಕ ದಲಿತ ವಿರೋಧಿ ಧೋರಣೆ ತೋರಿಸುತ್ತಿದ್ದು ಇತರ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚಿಸಿದೆ.
ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ತಮ್ಮಲ್ಲಿರುವ ಆಂತರಿಕವಾಗಿ ಸಮಸ್ಯೆಯನ್ನು ಸರಿ ಮಾಡಿಕೊಳ್ಳಲು ಬಿಜೆಪಿಯವರು ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
ಮುಡಾ ಅಕ್ರಮ ಎಂದು ಮೈಸೂರು ಚಲೊ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ. ಬೇಡ ಎಂದು ಹೇಳಿದವರು ಯಾರು’ ಎಂದು ಕುಟುಕಿದರು.
Previous Articleಸುಮ್ಮನಿರಬೇಕಾ ಅಂದ್ರು ದಿನೇಶ್ ಗುಂಡೂರಾವ್
Next Article ನಷ್ಟದಲ್ಲಿದೆಯಾ ವಿ ಆರ್ ಎಲ್ ಸಂಸ್ಥೆ.