Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲೂ ಡಿನ್ನರ್ ಪಾಲಿಟಿಕ್ಸ್.
    ರಾಜಕೀಯ

    ಬಿಜೆಪಿಯಲ್ಲೂ ಡಿನ್ನರ್ ಪಾಲಿಟಿಕ್ಸ್.

    vartha chakraBy vartha chakraJanuary 9, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.9:
    ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿರುವ ಔತಣಕೂಟ ರಾಜಕಾರಣ ಇದೀಗ ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲೂ ಆರಂಭಗೊಂಡಿದ್ದು ಕುತೂಹಲ ಮೂಡಿಸಿದೆ.
    ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕುರಿತಂತೆ ಉಂಟಾಗಿರುವ ಅಸಮಾಧಾನದ ಬೆನ್ನಲ್ಲೇ ಕಳೆದ ರಾತ್ರಿ ತಟಸ್ಥರು ಎನ್ನಲಾದ ಬಣದ ಶಾಸಕರು ಮತ್ತು ಹಿರಿಯ ನಾಯಕರು ಭೋಜನಕೂಟ ನಡೆಸಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಣ ಬಡಿದಾಟಕ್ಕೆ ಬ್ರೇಕ್ ಹಾಕಬೇಕು ಹೈಕಮಾಂಡ್ ಕೂಡಲೇ ಮಧ್ಯಪ್ರವೇಶಿಸಿ ಉಭಯ ಬಣಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ ಗೊಂದಲ ಪರಿಹರಿಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಗಿದೆ.
    ಪಕ್ಷದ ಅಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಬಣ ವಿಜಯೇಂದ್ರ ಪದಚ್ಯುತಿಗೆ ಪಟ್ಟು ಹಿಡಿದಿದೆ. ಇದರ ಬೆನ್ನಲ್ಲೇ ಮಾಜಿ ಸಚಿವರಾದ ರೇಣುಕಾಚಾರ್ಯ ಮತ್ತು ಕಟ್ಟ ಸುಬ್ರಹ್ಮಣ್ಯ ನಾಯ್ಡು ನೇತೃತ್ವದ ಬಣ ಭಿನ್ನರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಇದು ಪಕ್ಷ ಸಂಘಟನೆಯ ಮೇಲೆ ದೊಡ್ಡ ಪರಿಣಾಮ ಬೀರಿದ್ದು ಗೊಂದಲ ಉಂಟಾಗಿದೆ ಇದನ್ನು ಬಗೆಹರಿಸಲು ಹೈಕಮಾಂಡ್ ಮಧ್ಯಪ್ರವೇಶಿಸಲು ಒತ್ತಾಯಿಸಬೇಕು ಎನ್ನುವ ತೀರ್ಮಾನಕ್ಕೆ ಕಳೆದ ರಾತ್ರಿಯ ಸಭೆ ಬಂದಿದೆ.
    ವಿಜಯೇಂದ್ರ ಸಭೆ:
    ಇದರ ಬೆನ್ನಲ್ಲೇ ಅಧ್ಯಕ್ಷ ವಿಜಯೇಂದ್ರ ಅವರು ನಾಳೆ ಮಾಜಿ ಶಾಸಕರು ಮತ್ತು ಸಚಿವರ ಔತಣಕೂಟ ಕರೆದಿದ್ದಾರೆ.
    ನಾಳೆ ಮಧ್ಯಾಹ್ನ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ಮಾಜಿ ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ವಿಜಯೇಂದ್ರ ಭೋಜನ ಕೂಟ ಏರ್ಪಡಿಸಿದ್ದು, ಸಭೆಗೆ ಕಡ್ಡಾಯವಾಗಿ ಎಲ್ಲರೂ ಆಗಮಿಸಬೇಕೆಂದು ಸೂಚನೆ ನೀಡಲಾಗಿದೆ.
    ಮೇಲ್ನೋಟಕ್ಕೆ ಇದೊಂದು ಪಕ್ಷದ ಸಂಘಟನೆ ಕುರಿತಾಗಿ ನಡೆಯಲಿರುವ ಸಭೆ ಎಂದೇ ಹೇಳಲಾಗುತ್ತಿದೆಯಾದರೂ ಬಿಜೆಪಿ ಒಳಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಸದ್ಯದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸಾಂಸ್ಥಿಕ ಚುನಾವಣೆ ನಡೆಯಲಿದ್ದು ಇದರಲ್ಲಿ ವಿಜಯೇಂದ್ರ ಅವರ ಬೆಂಬಲಕ್ಕೆ ಎಲ್ಲರೂ ನಿಲ್ಲುವಂತೆ ಮನವಿ ಮಾಡಲು ಈ ಸಭೆ ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಾಲ್ಗೊಳ್ಳಲಿರುವ ಈ ಸಭೆಯಲ್ಲಿ ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲು ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ Election ಬಿಜೆಪಿ Bengaluru ಬೊಮ್ಮಾಯಿ ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ
    Next Article ಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Lpqmus on February 13, 2026 2:13 pm

      betmgm CO betmgm-play betmgm super bowl promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಾಲ್ವರಿಗೆ ಒಲಿದ ಅದೃಷ್ಟ !
    • Nwgbuv on ಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News
    • Pilxuw on ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.