ದೆಹಲಿ, ಮಹಾರಾಷ್ಟ್ರ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಹರಡುವಿಕೆಯ ಪ್ರಮಾಣ ಅಪಾಯಕಾರಿ ರೀತಿಯಲ್ಲಿ ಹೆಚ್ಚುತ್ತಿದ್ದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿರುವ ಕೇಂದ್ರ ಸರ್ಕಾರ ಸೋಂಕು ಹರಡುವಿಕೆ ತಡೆಗಟ್ಟಲು ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದೆ.
ಸೋಂಕು ಹರಡುವಿಕೆಯ ಮೇಲ್ವಿಚಾರಣೆಯನ್ನು ಮುಂದುವರಿಸಲು ಮತ್ತು ಕೋವಿಡ್-19 ರ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ಜನನಿಬಿಡ ಪ್ರದೇಶಗಳಲ್ಲಿ ಅಗತ್ಯವಾಗಿ ಮಾಸ್ಕ್ ಧರಿಸಲೇಬೇಕು.ಎಲ್ಲರೂ ಮುಂಜಾಗ್ರತಾ ಲಸಿಕೆ ಹಾಕಿಸಿಕೊಳ್ಳಬೇಕು ಎನ್ನುವುದು ಸೇರಿದಂತೆ ಕೋವಿಡ್ ನಿಯಮಾವಳಿಗಳ ಪಾಲನೆ ಹಾಗೂ ‘ಪರೀಕ್ಷೆ-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಅನುಸರಣೆಯ ಐದು ತಂತ್ರಗಳನ್ನು ಮುಂದುವರಿಸುವಂತೆ ಹೇಳಿದೆ.
ರಾಜ್ಯಗಳು ಕಟ್ಟುನಿಟ್ಟಾಗಿ ನಿಗಾ ವಹಿಸುವುದು ಮತ್ತು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿದ್ದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ’. ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಪ್ರದೇಶಗಳಲ್ಲಿ ನಿಯಮಿತ ಮೇಲ್ವಿಚಾರಣೆ ಮತ್ತು ತ್ವರಿತ ಅನುಸರಣಾ ಕ್ರಮವನ್ನು ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
Previous Articleದಾಖಲೆ ಬೇಕಾ…? ದಾಖಲೆ…
Next Article ಪಾರಂಪರಿಕ ಕಟ್ಟಡಗಳ ಉಳಿವಿಗೆ ಬೀದಿಗಿಳಿದ ಯದುವೀರ್