ಬೆಂಗಳೂರು,ಜ.23:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪಕ್ಕೆ ಸ್ಪೋಟಕ ತಿರುವು ಸಿಕ್ಕಿದೆ ಹಗರಣದ ಬಗ್ಗೆ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಲೋಕಾಯುಕ್ತದ ಉನ್ನತ ಮೂಲಗಳು ಈ ವಿಷಯವನ್ನು ಖಚಿತಪಡಿಸಿದ್ದು ತನಿಕಾ ವರದಿಯನ್ನು ಸೋಮವಾರ ರಾಜ್ಯ ಹೈಕೋರ್ಟ್ ಗೆ ಸಲ್ಲಿಸಲಿದ್ದಾರೆ.
ಬದಲಿ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೂ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಡಿ ನೋಟಿಫಿಕೇಷನ್ ಅಕ್ರಮ ಕುರಿತಂತೆ ಇವರ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿರುವ ವರದಿ ಅಕ್ರಮದಲ್ಲಿ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಿದೆ.
ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಗೊತ್ತಾಗಿದೆ.
ಹಗರಣ ಆರೋಪದ ಬಗ್ಗೆ ತನಿಖೆ ನಡೆಸಲು ನಿಯೋಜಿತರಾಗಿದ್ದ ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಮುಂಡಾ ಕಚೇರಿಗೆ ಭೇಟಿ ನೀಡಿ, 50:50 ಅನುಪಾತದ ಬಗ್ಗೆ ಚರ್ಚೆಯಾದ ಸಭೆಯ ಬಗ್ಗೆ ಮಾಹಿತಿ ಸಂಗ್ರಹಿಸಿದೆ. 2020ರ ನ.11ರಂದು ನಡೆದ ಸಭೆ ನಡಾವಳಿ ಪರಿಶೀಲಿಸಿ ಅಂದಿನ ಸಭಾ ನಡವಳಿ ಧ್ವನಿ ಸುರಳಿ ಕೇಳಿಸಿಕೊಂಡು ಅದರ ಮಾಹಿತಿಯನ್ನೂ ದಾಖಲಿಸಿಕೊಂಡಿದೆ.
50-50 ಅನುಪಾತ ಚರ್ಚೆ:
ಅಂದಿನ ಸಭೆಯಲ್ಲಿ ಮಾಜಿ ಆಯುಕ್ತ ನಟೇಶ್ ಹಾಗೂ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಇದ್ದ ಅವಧಿಯ ಸಭೆ ಆಡಿಯೋ ಇದ್ದಾಗಿದ್ದು ಅಂದಿನ ಸಭೆಯಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಎಸ್.ಎ ರಾಮ್‌ದಾಸ್, ಎಲ್. ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು.
ಸಭೆಯಲ್ಲಿ 50-50 ಅನುಪಾತ ಚರ್ಚೆ ನಡೆದಿತ್ತು. ಇದರ ಮಾಹಿತಿಯನ್ನು ಲೋಕಾಯುಕ್ತ ತಂಡ ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಿದೆ.
Previous Articleಭೀಭತ್ಸ ಹತ್ಯೆ – ಬೆಚ್ಚಿ ಬಿದ್ದ ಜನ
Next Article ದಿವಾಕರ್ ಬಾಬು ಕೊಲೆಗೆ ಶ್ರೀ ರಾಮುಲು ಸ್ಕೆಚ್ ಹಾಕಿದ್ದರಾ.?