ಬೆಂಗಳೂರು,ಜೂ.12-
ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ರೇಣುಕಾಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಗಳನ್ನು ನೀಡಿರುವುದು ಪಶ್ಚಿಮ ವಿಭಾಗದ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ಸಾವನ್ನಪ್ಪಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ
ಆಗ ಬೇರೆ ಗ್ಯಾಂಗ್ ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ.
ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
ಪೊಲೀಸರು ತನಿಖೆ ಚುರುಕು ಗೊಳಿಸಿದಂತೆ ಹಣ ಪಡೆದಿದ್ದ ಗ್ಯಾಂಗ್ನವರು ರಾತ್ರಿ ಯಿಡೀ ದರ್ಶನ್ ಗ್ಯಾಂಗ್ ಜೊತೆ ಮೊಬೈಲ್ ಮೂಲಕ ಸಂಭಾಷಣೆ ಮಾಡಿರುವ ವಿಚಾರವೂ ಬಹಿರಂಗಗೊಂಡಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತು. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು.
ಶವ ವಿಲೇವಾರಿ ಗ್ಯಾಂಗ್ ಸಹ ದರ್ಶನ್ ಜೊತೆಗೆ ಜೈಲಿನಲ್ಲಿದೆ. ಶೆಡ್ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರು, ದರ್ಶನ್ಗೆ ಗ್ಯಾಂಗ್ ಅನ್ನು ಪರಿಚಯಿಸಿದವರು, ರೇಣುಕಾ ಸ್ವಾಮಿಯನ್ನು ಅಪಹರಿಸಿಕೊಂಡು ಬಂದವರು ಎಲ್ಲವರನ್ನೂ ಪೊಲೀಸರು ಬಂಧಿಸಿದ್ದಾರೆ.


1 Comment
Entre no Mostbet e descubra o verdadeiro significado de “jogar com vantagem” – https://mostbetpt.pro/ , Mostbet entrega emoГ§ГЈo, variedade e bГґnus que realmente surpreendem .