ಬೆಂಗಳೂರು,ಜ.22:
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ಮಿತಿಮೀರಿದ್ದು ಇವುಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ಗೃಹ ಮಂತ್ರಿ ಡಾ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ನವರಿಂದ ಸಾರ್ವಜನಿಕರಿಗೆ ಕಿರುಕುಳ ವಿಚಾರ ಗಂಭೀರವಾಗಿ ಪರಿಗಣಿಸಿದ್ದು, ಯಾರೇ ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು
ಈಗಾಗಲೇ ಕೆಲ ಮೈಕ್ರೋ ಫೈನಾನ್ಸ್ ನವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಇದನ್ನು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಪರವಾನಗಿ ಇಲ್ಲದ ಹಣಕಾಸು ಸಂಸ್ಥೆಗಳ ಬಗ್ಗೆ ಸರ್ವೇ ಮಾಡಬೇಕಿದೆ ಎಂದರು.
ಎಲ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಯಾವುದೇ ಮೈಕ್ರೋಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಸಾಲ ಮರುಪಾವತಿಗಾಗಿ ಬೆದರಿಕೆ ಹಾಕುವುದು ಆಸ್ತಿ
ಜಪ್ತಿ ಮಾಡುವುದಾಗಿ ನೋಟಿಸ್ ನೀಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು
Previous Articleಸಾಲದಲ್ಲಿ ದಾಖಲೆ ಮಾಡುತ್ತಾರಂತೆ ಸಿಎಂ ಸಿದ್ದರಾಮಯ್ಯ
Next Article ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ