Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೋಗಿ ಯಡವಟ್ಟು? 30 ಬಲಿ
    Viral

    ಯೋಗಿ ಯಡವಟ್ಟು? 30 ಬಲಿ

    vartha chakraBy vartha chakraJanuary 31, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಗತ್ತಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳ ಪ್ರಯಾಗ್‌ರಾಜ್‌ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. 45 ದಿನಗಳ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಕೋಟ್ಯಂತರ ಮಂದಿ ಸೇರಿದ್ದಾರೆ. ಇದು ಗಂಗಾ, ಯಮುನಾ ನದಿಗಳ ಸಂಗಮ ಸ್ಥಳ. ಗುಪ್ತಗಾಮಿನಿಯಾದ ಸರಸ್ವತಿ ನದಿಯೂ ಇಲ್ಲಿ ಸಂಗಮಿಸುತ್ತಾಳೆ ಎಂಬ ನಂಬಿಕೆ ಇದೆ.
    ಆದರೆ, ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದ ನಾಲ್ವರು, ಅಸ್ಸಾಂ ಹಾಗೂ ಗುಜರಾತ್‌ನ ಒಬ್ಬರು ಸೇರಿ ವಿವಿಧ ರಾಜ್ಯಗಳಿಂದ ಪುಣ್ಯಸ್ನಾನಕ್ಕಾಗಿ ಆಗಮಿಸಿದ್ದ ಭಕ್ತರು ಸಾವನ್ನಪ್ಪಿದ್ದಾರೆ. ಕೆಲ ಗಾಯಾಳುಗಳನ್ನು ಸಂಬಂಧಿಕರು ಕರೆದೊಯ್ದಿದ್ದಾರೆ. 36 ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಆ ದುರಂತದ ಬಗ್ಗೆ ನೋಡೋ ಮುನ್ನ ಕುಂಭಮೇಳದ ಬಗ್ಗೆ ಒಂಚೂರು ಮಾಹಿತಿ ಕೊಡ್ತೀನಿ ಕೇಳಿ. ಇದು 144 ವರ್ಷಕ್ಕೊಮ್ಮೆ ನಡೆಯುತ್ತಿರೋ ಕುಂಭಮೇಳ ಅಂತ ಎಲ್ಲರೂ ಭಾವಿಸಿದ್ದಾರೆ. 2019ರಲ್ಲಿ ಕುಂಭ ಮೇಳ ನಡೆದಿತ್ತು. ಈ ಬಾರಿ ನಡೆಯುತ್ತಿರುವುದು 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳ. ಹಿಂದಿನ ಬಾರಿ ಕುಂಭ ಮೇಳದಲ್ಲಿ 24 ಕೋಟಿ ಮಂದಿ ಭಾಗವಹಿಸಿದ್ದರು. ಈ ಬಾರಿ ಮಹಾಕುಂಭ ಮೇಳದಲ್ಲಿ 45 ಕೋಟಿ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಉತ್ತರ ಪ್ರದೇಶ ಸರ್ಕಾರವು ಸಿದ್ಧತೆಗಳನ್ನು ಮಾಡಿಕೊಂಡಿದೆ.
    ಕಳೆದ ಬಾರಿ 7,900 ಎಕರೆ ಜಾಗದಲ್ಲಿ ಕುಂಭ ಮೇಳ ಆಯೋಜಿಸಲಾಗಿತ್ತು. ಈ ಬಾರಿ ಶೇಕಡಾ 25ರಷ್ಟು ಹೆಚ್ಚು ಸ್ಥಳವನ್ನು ಮಹಾಕುಂಭ ಮೇಳಕ್ಕಾಗಿ ಬಳಸಿಕೊಳ್ಳಲಾಗಿದೆ. ಕಳೆದ ಬಾರಿ ₹3,500 ಕೋಟಿ ವೆಚ್ಚದಲ್ಲಿ ಕುಂಭಮೇಳ ನಡೆದಿತ್ತು. ಈ ಬಾರಿ ಮಹಾಕುಂಭ ಮೇಳದ ವೆಚ್ಚ ಡಬಲ್ ಆಗಿದೆ. 2019ರಲ್ಲಿ ಘಾಟ್‌ಗಳ ಉದ್ದ 8 ಕಿಲೋ ಮೀಟರ್ ಇತ್ತು. ಈ ಬಾರಿ ಅದನ್ನು 12 ಕಿಲೋ ಮೀಟರ್​​ಗೆ ಹೆಚ್ಚಿಸಲಾಗಿದೆ. ರೈಲು, ಹೆದ್ದಾರಿ ಪ್ರಯಾಣದ ವ್ಯವಸ್ಥೆಯಲ್ಲೂ ಇದೇ ರೀತಿಯ ಹೆಚ್ಚಳವಾಗಿದೆ.
    ಮಹಾಕುಂಭ ಮೇಳಕ್ಕಾಗಿ ಮಹಾಕುಂಭ ನಗರ ಎನ್ನುವ ತಾತ್ಕಾಲಿಕ ನಗರವನ್ನೇ ಸೃಷ್ಟಿಸಲಾಗಿದ್ದು, ಈ ಪ್ರದೇಶವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿದೆ. ಪ್ರತಿ ದಿನ ಅಲ್ಲಿ 50 ಲಕ್ಷದಿಂದ 1 ಕೋಟಿ ಭಕ್ತರಿಗೆ ತಂಗುವ ವ್ಯವಸ್ಥೆ ಮಾಡಲಾಗಿದೆ. ಆದರೂ ಕುಂಭಮೇಳದಲ್ಲಿ ಅನಾಹುತ ಸಂಭವಿಸಿದೆ.
    ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನಕ್ಕೆ ಭಕ್ತ ಸಾಗರ ಹರಿದುಬಂದ ಪರಿಣಾಮ ಕಾಲ್ತುಳಿತ ಸಂಭವಿಸ್ತು. ಸಂಗಮ್‌ನಿಂದ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ನೂಕು ನುಗ್ಗಲು ಸಂಭವಿಸ್ತು.
    ಮಧ್ಯರಾತ್ರಿ ಕಾಲ್ತುಳಿತ ಸಂಭವಿಸಲು 2 ಕಾರಣಗಳಿವೆ. ಗಮ್ ಎಂಬಲ್ಲಿನ ಸೇತುವೆಗಳನ್ನು ಮುಚ್ಚಲಾಗಿತ್ತು. ಇದರಿಂದಾಗಿ ಸಂಗಮದಲ್ಲಿ ಕೋಟಿಗಟ್ಟಲೆ ಜನ ಸೇರತೊಡಗಿದರು. ಸಂಗಮ ಪ್ರದೇಶದಲ್ಲಿ ಪ್ರವೇಶಕ್ಕೆ ಮಾತ್ರ ಮಾರ್ಗವಿದೆ. ಮತ್ತೆ ಹೊರಹೋಗಲು ಬೇರೆ ದಾರಿ ಇಲ್ಲ. ಸ್ನಾನ ಮಾಡಿದವರು ಅದೇ ಪ್ರವೇಶ ಪಡೆದ ದಾರಿಯಲ್ಲಿ ವಾಪಸ್ ಆಗಬೇಕು. ಹೀಗಾಗಿ ಜನ ಏಕಾಏಕಿ ಏರಿಕೆ ಆಗಿ ದಟ್ಟಣೆ ಹೆಚ್ಚಾಗಿತ್ತು.
    ಅತ್ತ ಜನಸ್ತೋಮದ ನಡುವೆ ಜನರು ಕಳೆದುಹೋಗುವ ಆತಂಕದಿಂದ ಕೈಗೆ ಹಗ್ಗ ಕಟ್ಟಿಕೊಂಡು ಪುಣ್ಯಸ್ನಾನಕ್ಕೆ ಮುಂದಾಗಿದ್ರು. ಆಗ ನೂಕಾಟ ತಳ್ಳಾಟದಿಂದ ಕೆಳ ಬಿದ್ದವರಿಗೆ ಮೇಲೆ ಏಳಲು ಆಗಲೇ ಇಲ್ಲ.
    ಇಂಥಾ ದುರಂತ ಮತ್ತೊಮ್ಮೆ ಸಂಭವಿಸದಿರಲಿ.. ಯೋಗಿ ಸರ್ಕಾರ ಮತ್ತಷ್ಟು ಕ್ರಮ ಕೈಗೊಳ್ಳಲಿ ಅಂತ ಪ್ರಾರ್ಥಿಸೋಣ.

    Verbattle
    Verbattle
    Verbattle
    ಕರ್ನಾಟಕ ಧಾರ್ಮಿಕ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ
    Next Article ಲಾಂಗ್ ಹಿಡಿದು ಪುಂಡಾಟಿಕೆ ಮಾಡಿದ್ದ ರೌಡಿ ಅರೆಸ್ಟ್.
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    1 Comment

    1. Ecssyt on February 16, 2026 10:08 am

      mcluck Massachusetts https://mcluckcasinogm.com/ mcluck RI

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • LinwoodGah on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.