Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?
    ಸುದ್ದಿ

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    vartha chakraBy vartha chakraJuly 7, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.7:
    ಅಧಿಕಾರ ಹಸ್ತಾಂತರ ಕುರಿತಂತೆ ಕಾಂಗ್ರೆಸ್ ನಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಯಂತ್ರಕ್ಕೆ ಚುರುಕು ನೀಡುವ ಹೆಸರಿನಲ್ಲಿ ಮಂತ್ರಿಗಳ ಸಾಧನೆಯ ಸಮೀಕ್ಷೆ ಆರಂಭಿಸಿದ್ದಾರೆ.
    ಈ ಮೂಲಕ ಸದ್ಯದಲ್ಲೇ ನಡೆಯಲಿದೆ ಎನ್ನಲಾಗುತ್ತಿರುವ ಸಂಪುಟ ಪುನಾರಚನೆ ಸಮಯದಲ್ಲಿ ಯಾರನ್ನು ಕೈ ಬಿಡಲಾಗುತ್ತದೆ ಎನ್ನುವ ಕುರಿತು ಮಾಹಿತಿ ಸಂಗ್ರಹಿಸ ತೊಡಗಿದ್ದಾರೆ ಈ ಮೂಲಕ ಶಾಸಕರನ್ನು ತಮ್ಮ ಆಪ್ತ ವಲಯದಲ್ಲಿ ಗಟ್ಟಿಯಾಗಿ ಇಟ್ಟುಕೊಳ್ಳುವ ಮೂಲಕ ಅಗತ್ಯವಿದ್ದರೆ ಬಲಾಬಲ ಪ್ರದರ್ಶನಕ್ಕೆ ಮುಂದಾಗಲು ಮುಖ್ಯಮಂತ್ರಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
    ಮತ್ತೊಂದೆಡೆಯಲ್ಲಿ ಅಧಿಕಾರ ಹಂಚಿಕೆ ಸೂತ್ರದ ಒಪ್ಪಂದ ಜಾರಿಗೊಳಿಸಲು ಮುಂದಾಗಿರುವ ಹೈಕಮಾಂಡ್ ಸದ್ದಿಲ್ಲದೆ ಶಾಸಕರ ಅಭಿಪ್ರಾಯ ಆಲಿಸುತ್ತಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ, ಮಂತ್ರಿಗಳು ತಮ್ಮ ಅಭಿಪ್ರಾಯಗಳಿಗೆ ಮಾನ್ಯತೆ ನೀಡುತ್ತಿಲ್ಲ ಎಂದು ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನ ಪಡಿಸುವ ಹೆಸರಿನಲ್ಲಿ ಸಭೆ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲ ಈ ಸಭೆ ನಡೆಸುತ್ತಿದ್ದು ಶಾಸಕರ ಅಹವಾಲು ಕೇಳುವ ಜೊತೆ ಜೊತೆಗೆ ನಾಯಕತ್ವ ಬದಲಾವಣೆ ಕುರಿತಂತೆಯೂ ಕೂಡ ಮಾಹಿತಿಯ ಸಂಗ್ರಹಿಸುತ್ತಿದ್ದಾರೆ.
    ಈಗಾಗಲೇ 40 ಮಂದಿ ಶಾಸಕರ ಅಭಿಪ್ರಾಯ ಆಲಿಸಿ ಹೈಕಮಾಂಡ್ ಗೆ ವರದಿ ನೀಡಿರುವ ಅವರು ಉಳಿದ ಶಾಸಕರ ಅಭಿಪ್ರಾಯ ಪಾಲಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ
    ಸುರ್ಜೇವಾಲ 3 ದಿನಗಳ ಕಾಲ ರಾಜ್ಯದಲ್ಲಿ ಇರಲಿದ್ದಾರೆ. ಈ ಮೂರು ದಿನಗಳ ಕಾಲ ಅವರು ಸರಣಿಯಾಗಿ ಸಭೆಗಳನ್ನು ನಡೆಸಲಿದ್ದಾರೆ. ಒಟ್ಟು 61 ಶಾಸಕರ ಅಭಿಪ್ರಾಯಗಳನ್ನು ಅವರು ಸಂಗ್ರಹಿಸಲಿದ್ದಾರೆ. ಕಲಬುರಗಿ, ಬೆಳಗಾವಿ, ರಾಯಚೂರು, ಯಾದಗಿರಿ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಉತ್ತರ ಕನ್ನಡ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ- ಧಾರವಾಡ ಜಿಲ್ಲೆಗಳ ಶಾಸಕರ ಜೊತೆಗೆ ಅವರು ಮಾತುಕತೆ ನಡೆಸಲಿದ್ದಾರೆ.
    ಕಳೆದ ಎರಡು ವರ್ಷಗಳಲ್ಲಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಏನೆಲ್ಲಾ ಕೆಲಸ ಕಾರ್ಯ ಮಾಡಿದ್ದಾರೆ. ಭವಿಷ್ಯದ ಯೋಜನೆಗಳು ಏನೇನು, ಕ್ಷೇತ್ರದಲ್ಲಿ ಕೆಲಸ ಮಾಡಲು ಇರುವ ಅಡ್ಡಿಗಳೇನು ಎಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಅಲ್ಲದೆ ಕೆಲವು ಶಾಸಕರು ಸಚಿವರುಗಳ ಬಗ್ಗೆಯೂ ನೋವು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರುಗಳ ಸ್ಪಂದನೆ ಯಾವ ರೀತಿಯಲ್ಲಿ ಇದೆ? ಅಧಿಕಾರಿಗಳು ಯಾವ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂಬ ಬಗ್ಗೆಯೂ ಅವರು ಮಾಹಿತಿಯನ್ನು ಸಂಗ್ರಹ ಮಾಡಲಿದ್ದಾರೆ.
    ಪರಾಮರ್ಶೆ:
    ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ ಆರಂಭಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಆರ್ಥಿಕ ಇಲಾಖೆ, ಗೃಹ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
    ಉಳಿದಿರುವ ಇಲಾಖೆಗಳ ಬಗ್ಗೆ ನಾಳೆಯೂ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳ ಮತ್ತು ಭರವಸೆಗಳ ಅನುಷ್ಠಾನ ಇಲಾಖಾವಾರು ಬಿಡುಗಡೆಯಾಗಿರುವ ಅನುದಾನ ಮತ್ತು ಅದರ ವೆಚ್ಚ, ಬಾಕಿ ಯೋಜನೆಗಳ ಅಧಿಸೂಚನೆಗಳು, ಅನುದಾನದ ಲಭ್ಯತೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
    ಬಹಳಷ್ಟು ಇಲಾಖೆಗಳಲ್ಲಿ ಬಜೆಟ್‌ ಯೋಜನೆಗಳು ಈವರೆಗೂ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿವೆ. ಪ್ರತಿಯೊಂದಕ್ಕೂ ಅನುದಾನದ ಕೊರತೆಯ ನೆಪ ಹೇಳಿ ಅಧಿಕಾರಿಗಳು ಉಡಾಫೆ ನಡವಳಿಕೆ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳಿದ್ದವು.
    ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಇಲಾಖೆಯ ಜೊತೆ ಪ್ರತ್ಯೇಕ ಮಾತುಕತೆ ನಡೆಸುವ ಮೂಲಕ ಅದರಲ್ಲೂ ತಲಾ ಒಂದು ಗಂಟೆ ಸುದೀರ್ಘ ಅವಧಿಯ ಸಮಾಲೋಚನೆ ಮೂಲಕ ಇಲಾಖೆಯ ಮಂತ್ರಿಗಳು ಮತ್ತು ಅಧಿಕಾರಿಗಳಿಗೆ ಚುರುಕು ಮುಟ್ಟಿಸಲಿದ್ದಾರೆ

    Verbattle
    Verbattle
    Verbattle
    ಕಾಂಗ್ರೆಸ್ ಚಿತ್ರದುರ್ಗ ತುಮಕೂರು ಧಾರವಾಡ Bengaluru ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ
    Next Article ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Bbkgdf on ಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    • LarryCax on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.