Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರಾ..?
    Viral

    ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರಾ..?

    vartha chakraBy vartha chakraMay 29, 2025No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ. 28:
    ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಇದೀಗ ಏಕಾಏಕಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
    ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸಿನ ಹಿನ್ನೆಲೆಯಲ್ಲಿ ಯೋಧರನ್ನು ಗೌರವಿಸುವ ಸಲುವಾಗಿ ಕಾಂಗ್ರೆಸ್ ಸೇರ್ಪಡೆಸಿದ್ದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಕಳೆದ ರಾತ್ರಿ ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಸಿರುವ ಮಾತುಕತೆ ಕುತೂಹಲ ಮೂಡಿಸಿದೆ.
    ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿತ್ತು ಅಂದು ಹೈಕಮಾಂಡ್ ಮುಂದೆ ಏರ್ಪಟ್ಟ ಒಪ್ಪಂದದಂತೆ ಮೊದಲ ಎರಡು ವರ್ಷ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದು ಉಳಿದ ಅವಧಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಲಾಗಿತ್ತು.
    ಕಾಂಗ್ರೆಸ್ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆದ ಈ ಒಪ್ಪಂದದ ಬಗ್ಗೆ ಇಲ್ಲಿಯವರೆಗೂ ಯಾರೂ ಅಧಿಕೃತವಾಗಿ ಮಾತನಾಡಿಲ್ಲ. ಹಾಗೆಯೇ ಯಾರು ಕೂಡ ಇಂತಹ ಒಪ್ಪಂದ ಏರ್ಪಟ್ಟಿಲ್ಲ ಎಂದು ಸಹ ಹೇಳುತ್ತಿಲ್ಲ ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಗೆ ರಾಜಿ ಸೂತ್ರ ಏರ್ಪಟ್ಟಿದೆ ಎಂಬ ಮಾತುಗಳು ಮಾತ್ರ ಬಲವಾಗಿ ಕೇಳಿ ಬರುತ್ತಿದೆ.
    ಇದೀಗ ಈ ರಾಜಿಸೂತ್ರಕ್ಕೆ ಮತ್ತಷ್ಟು‌ ರೆಕ್ಕೆ ಪುಕ್ಕಗಳು ಬಂದಿವೆ.
    ರಾಜ್ಯ ಸರ್ಕಾರ ಎರಡು ವರ್ಷ ಅಧಿಕಾರ ಅವಧಿ ಪೂರ್ಣಗೊಳಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಏರ್ಪಡಿಸಲಾಗಿತ್ತು ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವೇದಿಕೆಯಲ್ಲಿಯೇ ಈ ಕುರಿತು ಚರ್ಚೆ ನಡೆಸುವ ಮೂಲಕ ಗಮನ ಸೆಳೆದಿದ್ದರು.
    ಆದರೆ ಅಂದು ಈ ಕುರಿತಂತೆ ಯಾವುದೇ ರೀತಿಯ ಹೇಳಿಕೆ ಅವರ ಬಿದ್ದಿರಲಿಲ್ಲ ಆದರೆ ಇದೀಗ ವೇಣುಗೋಪಾಲ್ ಮತ್ತು ಸುರ್ಜೇವಾಲ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುಧೀರ್ಘ ಮಾತುಕತೆ ನಡೆಸಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಮೂಲಗಳು ತಿಳಿಸಿವೆ.
    ಈ ವೇಳೆ ಉಭಯ ನಾಯಕರು ಬರುವ ನವೆಂಬರ್ ಬೆಳೆಗೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಇದಕ್ಕಾಗಿ ಹೈಕಮಾಂಡ್ ರಾಜಿ ಸೂತ್ರ ಒಂದನ್ನು ಏರ್ಪಡಿಸುತ್ತೇವೆ ಮುಖ್ಯಮಂತ್ರಿ ಸ್ಥಾನ ತೊರೆಯಲಿರುವ ಸಿದ್ದರಾಮಯ್ಯ ಅವರಿಗಾಗಿ ಉನ್ನತ ಹುದ್ದೆಯೊಂದನ್ನು ಸೃಷ್ಟಿ ಮಾಡಲಾಗುವುದು ಹಾಗೆ ಪಕ್ಷದಲ್ಲಿ ಅವರಿಗೆ ಮಹತ್ವದ ಜವಾಬ್ದಾರಿ ನೀಡಿ ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ನಡೆಸುವಂತೆ ವ್ಯವಸ್ಥೆ ಮಾಡಲು ಹೈಕಮಾಂಡ್ ಸಿದ್ಧತೆ ನಡೆಸಿದೆ ಇದಕ್ಕೆ ನೀವು ಸಿದ್ದರಾಗಬೇಕು ಎಂದು ಶಿವಕುಮಾರ್ ಅವರಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.
    ಉನ್ನತ ಮೂಲಗಳ ಪ್ರಕಾರ ಮುಖ್ಯಮಂತ್ರಿ ಹುದ್ದೆ ತೊರೆಯಲಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಸಲಾಗುತ್ತದೆ ಪಕ್ಷದ ಶಾಸಕಾಂಗ ನಾಯಕರಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪ ಮಾಡಲಿದ್ದು ಅದಕ್ಕೆ ಉಳಿದ ಶಾಸಕರು ಅನುಮೋದನೆ ನೀಡಲಿದ್ದಾರೆ ಈ ಮೂಲಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಗುಡ್ಡೆ ತೊರೆದುರೂ ಕೂಡ ಪಕ್ಷ ಮತ್ತು ಸರ್ಕಾರದಲ್ಲಿ ತಮ್ಮದೇ ಆದ ಹಿಡಿತ ಹೊಂದಲು ತಂತ್ರ ಹೆಣೆಯಲಾಗಿದೆ ಎಂದು ಗೊತ್ತಾಗಿದೆ.
    ಮಹಾದೇವಪ್ಪ ಪ್ರವೇಶ:
    ಈ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿಯ ಪಾಳಯದಲ್ಲಿ ಮತ್ತೊಂದು ರಾಜಕೀಯ ತಂತ್ರಗಾರಿಕೆಯನ್ನು ಹೆಣೆಯಲಾಗುತ್ತಿದೆ ಯಾವುದೇ ಕಾರಣಕ್ಕೂ ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಾರದು ಒಂದುವೇಳೆ ಅಂತಹ ಅನಿವಾರ್ಯತೆ ಉಂಟಾದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದು ಅಲ್ಲಿಯೇ ಶಾಸಕರ ಅಭಿಪ್ರಾಯ ಆಲಿಸಿ ತೀರ್ಮಾನ ಕೈಗೊಳ್ಳಬೇಕು ಎಂಬ ಒತ್ತಡವನ್ನು ಹೈಕಮಾಂಡ್ ಮೇಲೆ ಹೇರಲು ಸಿದ್ಧತೆ ನಡೆದಿದೆ.
    ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಿದ್ದು ಶಾಸಕಾಂಗ ಪಕ್ಷದ ಸಭೆಯಲ್ಲಿ ಇವರಾರು ಕೂಡ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾರನ್ನು ತಮ್ಮ ನಾಯಕ ಎಂದು ಕೋಪಲು ಸಿದ್ದರಿಲ್ಲ ಈ ಅವಕಾಶವನ್ನು ಬಳಸಿಕೊಂಡು ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಮುಂದುವರೆಯಲು ತಂತ್ರ ರೂಪಿಸಿದ್ದಾರೆ ಎಂದು ಗೊತ್ತಾಗಿದೆ.
    ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಒಪ್ಪದೇ ಸರ್ಕಾರ ರಚನೆಯಾದ ಸಮಯದಲ್ಲಿ ಆಗ ಒಪ್ಪಂದದಂತೆ ಅಧಿಕಾರ ಹಸ್ತಾಂತರವಾಗಬೇಕು ಎಂಬ ವಾದ ಮಂಡಿಸಿದರೆ, ಅದಕ್ಕೆ ದಲಿತ ಮುಖ್ಯಮಂತ್ರಿ ಎಂಬ ವಾದ ಮಂಡಿಸಲು ಸಿದ್ಧತೆ ನಡೆದಿದೆ.
    ಈ ಹಿಂದೆ ಇಂತಹ ಪ್ರಯತ್ನ ನಡೆದಿದ್ದು ಗೃಹ ಮಂತ್ರಿ ಪರಮೇಶ್ವರ್ ಮತ್ತು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಹಲವು ಸಭೆಗಳು ನಡೆದಿದ್ದವು. ರಾಜ್ಯದಲ್ಲಿ ಇಲ್ಲಿಯವರೆಗೆ ದಲಿತ ಸಮುದಾಯಕ್ಕೆ ಸಿಕ್ಕಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
    ಸುಧೀರ್ಘ ಒಂಬತ್ತು ವರ್ಷಗಳ ಕಾಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಪರಮೇಶ್ವರ ಅವರಿಗೆ ಈ ಬಾರಿ ಉನ್ನತ ಹುದ್ದೆ ಲಭಿಸಬೇಕು ಎಂದು ವಾದ ಮಂಡಿಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ವಾದವನ್ನು ಬೆಂಬಲಿಸಿದ್ದರು.
    ಆದರೆ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇತ್ತೀಚಿನ ಜಾರಿ ನಿರ್ದೇಶನಾಲಯದ ದಾಳಿ ಹಿನ್ನೆಲೆಯಲ್ಲಿ ಪರಮೇಶ್ವರ ಹೆಸರು ತೆರೆಮರೆಗೆ ಸರಿದಿದೆ. ಹೀಗಾಗಿ ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ದಲಿತ ಸಮುದಾಯದ ಹಿರಿಯ ನಾಯಕ ಡಾ. ಎಚ್ ಸಿ ಮಹದೇವಪ್ಪ ಅವರ ಹೆಸರು ಮುನ್ನೆಲೆಗೆ ಬಂದಿದೆ.
    ಮಹಾದೇವಪ್ಪ ಅವರು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ್ದು ಈ ವರ್ಗ ಕಾಂಗ್ರೆಸ್ ನ ಪ್ರಬಲ ಮತ ಬ್ಯಾಂಕ್ ಆಗಿದೆ ಜೊತೆಗೆ, ಮಹಾದೇವಪ್ಪ ಅವರು ಸಂವಿಧಾನ ನಡಿಗೆ ಹಾಗೂ ಸರ್ಕಾರದ ಎಲ್ಲ ಕಚೇರಿಗಳಲ್ಲೂ ಸಂವಿಧಾನದ ಪೀಠಿಕೆ ಅಳವಡಿಸುವ ತೀರ್ಮಾನದ ಮೂಲಕ ಹೈಕಮಾಂಡ್ ಗಮನ ಸೆಳೆದಿದ್ದಾರೆ ಜೊತೆಗೆ ಸಂಘ ಪರಿವಾರ ಮತ್ತು ಬಿಜೆಪಿಯ ಕಟು‌ ಟೀಕಾಕಾರವಾಗಿಯೂ ಕೂಡ ಗಮನ ಸೆಳೆದಿರುವ ಮಹಾದೇವಪ್ಪ ಅವರ ಹೆಸರನ್ನು ಪ್ರಸ್ತಾಪಿಸಿದರೆ ಹೈಕಮಾಂಡ್ ಕೂಡ ಸಮ್ಮತಿಸಬಹುದು ಎನ್ನುವುದು ಈ ಪಾಳಯದ ಲೆಕ್ಕಾಚಾರವಾಗಿದೆ.
    ಹಿನ್ನೆಲೆಯಲ್ಲಿ ಮುಂದಿನ ವಾರದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯದಲ್ಲಿ ಹಲವು ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    ಕಾಂಗ್ರೆಸ್ Election ಬಿಜೆಪಿ Bengaluru ರಾಜಕೀಯ ರಾಹುಲ್ ಗಾಂಧಿ ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    Next Article ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Daviddek on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • aviator_rukr on ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.