Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ !
    ಸುದ್ದಿ

    ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ !

    vartha chakraBy vartha chakraAugust 4, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.4-
    ಮತಗಳ್ಳತನ ಕುರಿತು ಗಂಭೀರ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದರ ವಿರುದ್ಧ ನಾಳೆ ಬೆಂಗಳೂರಿನಿಂದ ಆರಂಭಿಸಬೇಕಾಗಿದ್ದ ಹೋರಾಟ ಮುಂದುಡಲಾಗಿದೆ
    ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ‌ ಎಂದು ಹೇಳಿದರು
    ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.
    “ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ ಎಂದರು
    ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.
    “ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದರು.
    “ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ Bengaluru ಮೈ ರಾಹುಲ್ ಗಾಂಧಿ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Next Article ಜಾಂಡೀಸ್ ಗೆ ಬಲಿಯಾದ ಯುವ ನಟ !
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Tracymix on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Ksncsh on ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.