ಬೆಂಗಳೂರು,ಆ.13:
ಮೀಸಲಾತಿ ನಿಗಧಿ ಸೇರಿ ಹಲವು ತಾಂತ್ರಿಕ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ
ಜಿಲ್ಲಾ , ತಾಲ್ಲೂಕು ಪಂಚಾಯಿತಿ ಎಲ್ಲ ಸ್ಥಳೀಯ ಸಂಸ್ಥೆಗಳ Election ನಡೆಸಲು ಶೀಘ್ರವೇ ನಿರ್ಧಾರ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಚುನಾವಣೆಗೆ, ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿಯಾಗಬೇಕಿದೆ ಈ ನಿಟ್ಟಿನಲ್ಲಿ ಸರ್ಕಾರ ಪ್ರಕ್ರಿಯೆಗಳನ್ನು ಆರಂಭಿಸಿದೆ ಎಂದು ತಿಳಿಸಿದರು
ಶಿವಮೊಗ್ಗ ಸೇರಿದಂತೆ ನಾಲ್ಕು ಮಹಾನಗರ ಪಾಲಿಕೆಗಳಿಗೆ ಹಿಂದಿನ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಆಧಾರದ ಮೇಲೆ ಚುನಾವಣೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.ಈ ಹಿನ್ನೆಲೆಯಲ್ಲಿ ನಾಲ್ಕು ಪಾಲಿಕೆಗಳಿಗೂ ಅದೇ ಆಧಾರದ ಮೇಲೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸಲು ಹೈಕೋರ್ಟ್ 4 ವಾರಗಳ ಕಾಲಾವಕಾಶ ನೀಡಿದ್ದು ಅಷ್ಟರೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.
Previous Articleವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
Next Article ಭೋವಿ ನಿಗಮದ ಅಕ್ರಮದಲ್ಲಿ ಯಾರಿಗೆ ಪಾಲು.