Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.
    ಸುದ್ದಿ

    ಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.

    vartha chakraBy vartha chakraSeptember 17, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.17-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಸಂಬಂಧ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಈ ವೇಳೆ ದಿನೇಶ್ ಕುಮಾರ್ ಅವರು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.
    ಇಡಿ ಅಧಿಕಾರಿಗಳು ವಿಚಾರಣೆಯ ಸಮಯದಲ್ಲಿ ದಿನೇಶ್ ಕುಮಾರ್ ಅವರು ಆಯುಕ್ತರಾಗಿದ್ದ ಸಮಯದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿರುವ ದಾಖಲೆಗಳನ್ನು ಮುಂದಿಟ್ಟಿದ್ದಾರೆ.
    ಈ ದಾಖಲೆಗಳನ್ನು ನೋಡುತ್ತಿದ್ದಂತೆ ಸುಸ್ತಾಗಿ ಕುಸಿದು ಕುಳಿತ ದಿನೇಶ್ ಕುಮಾರ್ ಅವರು ಕೆಲವು ನಿಮಿಷಗಳ ಕಾಲ ಏನನ್ನು ಮಾತನಾಡದೆ ಮೌನವಹಿಸಿದರು ಎಂದು ಇಡಿ ಮೂಲಗಳು ತಿಳಿಸಿವೆ.
    ನಂತರ ಸಾವರಿಸಿಕೊಂಡ ಅವರು, ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ಓದಿ ಪರಿಶೀಲಿಸಿದರು. ಈ ರೀತಿಯ ದಾಖಲೆಗಳನ್ನು ಸೃಷ್ಟಿಸಲು ಉಂಟಾದ ಅನಿವಾರ್ಯತೆ ಮತ್ತು ಆದರ ಹಿಂದಿರುವ ಕೆಲವು ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಇದರಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಉನ್ನತ ಮಟ್ಟದಲ್ಲಿರುವ ವ್ಯಕ್ತಿಗಳು ಒತ್ತಡ ತಂದ ಪರಿಣಾಮವಾಗಿ ಈ ರೀತಿಯ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ವಿವರಣೆ ನೀಡಿರುವುದಾಗಿ ಗೊತ್ತಾಗಿದೆ.
    ತಾವು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮರುಹಂಚಿಕೆ ಆದೇಶ ಹೊರಡಿಸಲು ಅನಿವಾರ್ಯವಾದ ಕೆಲವು ವಿದ್ಯಮಾನಗಳ ಬಗ್ಗೆ ವಿವರಣೆ ಮಾತ್ರವಲ್ಲದೆ ಅದಕ್ಕೆ ಸಂಬಂಧಪಟ್ಟ ಕೆಲವು ದಾಖಲೆಗಳ ಕುರಿತಂತೆಯೂ ದಿನೇಶ್ ಕುಮಾರ್ ತನಿಖಾ ತಂಡಕ್ಕೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.
    ತಾವು ಪ್ರಾಧಿಕಾರದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಹಿಡಿದು ಆ ಹುದ್ದೆಯಿಂದ ನಿರ್ಗಮಿಸುವವರೆಗೆ ಯಾವ ರೀತಿಯ ಒತ್ತಡವನ್ನು ಎದುರಿಸಬೇಕಾಗಿತ್ತು. ಯಾರಲ್ಲ ತಮಗೆ ಕರೆ ಮಾಡಿ ಕೆಲಸ ಮಾಡುವಂತೆ ಹೇಳಿದರು ಎಂಬ ಕುರಿತು ಇಡೀ ಅಧಿಕಾರಿಗಳ ಮುಂದೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
    ದಿನೇಶ್ ಕುಮಾರ್ ನೀಡಿರುವ ಎಲ್ಲ ಹೇಳಿಕೆಗಳನ್ನು ವಿಡಿಯೋ ಚಿತ್ರಣ ಮಾಡಿಕೊಂಡಿರುವ ಅಧಿಕಾರಿಗಳು ಅದರ ಆಧಾರದಲ್ಲಿ ಇನ್ನಷ್ಟು ದಾಖಲೆಗಳಿಗಾಗಿ ಹುಡುಕಾಟ ನಡೆಸಲು ತೀರ್ಮಾನಿಸಿದ್ದಾರೆ ಇದಕ್ಕಾಗಿ ಪ್ರತ್ಯೇಕ ತಂಡ ನಿಯೋಜಿಸುವ ತೀರ್ಮಾನ ಕೈಗೊಂಡಿದ್ದಾರೆ ಎಂದು ಇಡೀ ಮೂಲಗಳು ತಿಳಿಸಿವೆ.
    2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್‌ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು.
    ಪರ್ಯಾಯ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ದಿನೇಶ್ ಕುಮಾರ್ ಅವರಿಗೆ ಸೂಚನೆ ನೀಡಿತ್ತು.
    ಹಗರಣದ ಸಂಬಂಧ ವಿಚಾರಣೆಗೆ ಹಾಜರಾದ ದಿನೇಶ್‌ ಕುಮಾರ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ದಿನೇಶ್ ಅಕ್ರಮ ಹಣ ವರ್ಗಾವಣೆ ಮಾಡಿರುವ ಹಿನ್ನಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗಲು  ನೋಟೀಸ್ ಜಾರಿಗೊಳಿಸಿತ್ತು.
    ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.

    Verbattle
    Verbattle
    Verbattle
    Bangalore Congress crime Government Karnataka News Politics Trending Varthachakra ಇಡಿ ಕಾಂಗ್ರೆಸ್ ಕಾನೂನು Bengaluru ಮೈ ಮೈಸೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಿನೇಶ್ ಗುಂಡೂರಾವ್ ಗೆ ಲೋಕಾಯುಕ್ತ ನೋಟಿಸ್.
    Next Article ಸದಾನಂದ ಗೌಡರಿಗೆ ಸೈಬರ್ ವಂಚಕರ ಕಾಟ.
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rgmqzu on ಸಿದ್ದರಾಮಯ್ಯ ಅವರಿಗೆ ED ಉರುಳು .
    • Andrewhooca on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Williamdug on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.