ಮಂಗಳೂರು,ಜು.5-
ಅಪಘಾತ ಪ್ರಕರಣವೊಂದರ ಬಂಧಿತನಾದ
ಹಿಂದೂ ಮುಖಂಡನನ್ನು ವಿಚಾರಣೆ ನಡೆಸಿದ ಪೊಲೀಸರು ಆತನ ಮೊಬೈಲ್ ನಲ್ಲಿ ಸಂಗ್ರಹವಾಗಿದ್ದ ವಿಡಿಯೋ ತುಣುಕುಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.
ಇತ್ತೀಚೆಗೆ ಮೂಡುಬಿದಿರೆಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿತ್ತು.ಈ ವೇಳೆ ಅಲ್ಲಿಗೆ ಧಾವಿಸಿದ
ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ದೊಡ್ಡ ಗದ್ದಲ ಎಬ್ಬಿಸಿದ್ದರು.ಬಸ್ ಮಾಲೀಕರಿಂದ ಬಲವಂತವಾಗಿ ಹಣ ವಸೂಲಿ ಮಾಡಿ ಅದನ್ನು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಪರಿಹಾರವಾಗಿ ಕೊಟ್ಟಿದ್ದರು.
ಇದಾದ ನಂತರ ಅಪಘಾತಕ್ಕೀಡಾದ ಬಸ್ ಮಾಲೀಕರು ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ಬಲವಂತವಾಗಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಮೂಡುಬಿದಿರೆ ಪೊಲೀಸರು
ಹಿಂದೂ ಜಾಗರಣಾ ವೇದಿಕೆಯ ಸಮಿತ್ ರಾಜ್ ಧರೆಗುಡ್ಡೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು ಈ ವೇಳೆ ಅವರ ಮೊಬೈಲ್ ಪಡೆದು
ಪರಿಶೀಲನೆ ನಡೆಸಿದ್ದಾರೆ.ಅಲ್ಲದೆ ಮೊಬೈಲ್ ನ ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಸಂಘ ಪರಿವಾರ ನಾಯಕರ ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು ಅವುಗಳನ್ನು ಕಂಡು
ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ.
ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರತ್ಯೇಕ ದೂರು ನೀಡಿದ್ದಾರೆ.ಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಹಿಂದೂ ಜಾಗರಣಾ ವೇದಿಕೆಯ ಸಮಿತ್ ರಾಜ್ ಧರೆಗುಡ್ಡೆ ಅವರು ಈ ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಾಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.
ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದು, ಇತ್ತ ಈ ಬಗ್ಗೆ ವಿಚಾರಣೆ ನಡೆಸಲು ಸಮಿತ್ ರಾಜ್ ಗೆ ನೋಟೀಸ್ ನೀಡಲು ಸಿದ್ದತೆ ನಡೆಸಿದ್ದಾರೆ. ಬಸ್ ಗೆ ಕಲ್ಲು ತೂರಿದ ಘಟನೆಯಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಮತ್ತೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.
Previous Articleಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.
Next Article ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.