ಬೆಂಗಳೂರು,ನ.8-ಹಿಂದೂ ಪದ ಅಂದರೆ ಕಾಂಗ್ರೆಸ್ ನಾಯಕರಿಗೆ ಅಶ್ಲೀಲ, ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅವರಿಗೆ ಅಲರ್ಜಿ, ಈ ನಿಲುವು, ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಕಿಡಿ ಕಾರಿದರು.
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿ ಯವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು “ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು ದ್ವನಿಸಿದ್ದಾರೆ” ಎಂದರು.
ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನಡೆಯಿಂದಾಗಿ, ದೇಶದಲ್ಲಿ ಅಪ್ರಸ್ತುತ ವಾಗಿದೆ ಎಂದೂ, ಸಚಿವರು ಹೇಳಿದರು.
ಕೆಲವು ಸಂಘಟನೆಗಳು, ಟಿಪ್ಪು ಆಚರಣೆ ನಡೆಸುವ ಪ್ರಯತ್ನದ ಬಗ್ಗೆ, ಉತ್ತರಿಸಿದ ಸಚಿವರು,ಸ್ಥಳೀಯ ಸಂಸ್ಥೆಗಳು ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತವೆ ಎಂದರು.
ಪ್ರಧಾನ ಮಂತ್ರಿ ನರೆಂದ್ರ ಮೋದಿಯವರ ಬೆಂಗಳೂರು ಭೇಟಿಯ ಬಗ್ಗೆ ಮಾಹಿತಿ ನೀಡಿದ ಸಚಿವರು, ನಾಡ ಪ್ರಭು ಕೆಂಪೇ ಗೌಡರ ಪ್ರತಿಮೆಯ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆ, ಹಾಗೂ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನ ಉದ್ಘಾಟನೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ, ಶ್ರೀ ನರೇಂದ್ರ ಮೋದಿಯವರು, ಬೃಹತ್ ಜನಸ್ತೋಮ ವನ್ನೂ ಉದ್ದೇಶಿಸಿ ಮಾತಾಡಲಿದ್ದಾರೆ, ಎಂದರು.
ಪ್ರಧಾನಿಯವರ ಭೇಟಿಯ ಹಿನ್ನಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳ ನಿರ್ವಹಣೆಗೆ ಸುಮಾರು ನಾಲ್ಕು ಸಾವಿರ ರಕ್ಷಣಾ ಸಿಬ್ಬಂದಿಯನ್ನು ನಿಯುಕ್ತಿ ಗೋಳಿಸಲಾಗುತ್ತಿದೆ, ಎಂದರು.
ಆರೋಗ್ಯ ಸಚಿವ ಡಾ.ಸುಧಾಕರ್ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಇನ್ನಿತರ
ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
Previous Articleಮುರುಘಾ ಮಠದಲ್ಲಿ ಡ್ರಗ್ಸ್ ವ್ಯವಹಾರ!
Next Article ಸಿದ್ದರಾಮಯ್ಯಗೆ ಬೊಮ್ಮಾಯಿ ಕೇಳಿದ ಪ್ರಶ್ನೆ