ಬೆಂಗಳೂರು,ಡಿ.23-
ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಕಿಡಿಗೇಡಿಗಳು ಮತ್ತು ವಿಧ್ವಂಸರ ಕೆಂಗಣ್ಣು ಬಿದ್ದಿದೆ.
ಸಂಭ್ರಮಾಚರಣೆಯ ವೇಳೆ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕೆ ಅಶಾಂತಿ ಸೃಷ್ಟಿಗೆ ಸಂಚು ರೂಪಿಸಿದ್ದಾರೆ ಮತ್ತೊಂದೆಡೆ ವಿದ್ವಂಸ ಕೃತ್ಯಕ್ಕೂ ಬಾಹ್ಯ ಶಕ್ತಿಗಳು ಪಿತೂರಿ ನಡೆಸಿದೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ.
ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಿನಗಣನೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವಹಿಸಲು ನಗರ ಆಯುಕ್ತ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುಪ್ತದಳ ರವಾನಿಸಿರುವ ಎಚ್ಚರಿಕೆ ಸಂದೇಶದ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಆದೇಶಿಸಿದ್ದಾರೆ.
ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ,ಮುನ್ನೆಚ್ಚರಿಕೆ ವಹಿಸಿ ಮಾಲ್ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು.ಎಲ್ಲಾ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.
ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಬೇಕು
ಅತಿ ಹೆಚ್ಚು ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.
Previous Articleರಾಬಿನ್ ಉತ್ತಪ್ಪ ತಪ್ಪು ಮಾಡಿಲ್ಲವಂತೆ.
Next Article ಸಿ.ಟಿ. ರವಿ ವಿರುದ್ಧ ಕಾನೂನು ಸಮರ.