Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರವಿಂದ ಲಿಂಬಾವಳಿ ವಿರುದ್ಧ FIR
    ಅಪರಾಧ

    ಅರವಿಂದ ಲಿಂಬಾವಳಿ ವಿರುದ್ಧ FIR

    vartha chakraBy vartha chakraಜನವರಿ 2, 2023Updated:ಜನವರಿ 2, 2023ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.2-ಕಾರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಬೆಳ್ಳಂದೂರಿನ ಅಂಬಲಿಪುರ ನಿವಾಸಿ ಪ್ರದೀಪ್‌ ಅವರು ಆತ್ಮಹತ್ಯೆ  ಮಾಡಿಕೊಂಡ ಪ್ರಕರಣ ಸಂಬಂಧ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
    ಬಿಜೆಪಿಯ ಪ್ರಭಾವಿ‌ ಮುಖಂಡರೂ ಆಗಿರುವ ಅರವಿಂದ್ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರು ಡೆತ್ ನೋಟ್ ನಲ್ಲಿ ಬರೆದಿಟ್ಟು ಪ್ರದೀಪ್‌(47) ನಿನ್ನೆ ಸಂಜೆ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣದಲ್ಲಿ ಇಂಚಿಂಚು ಶೋಧ ನಡೆಸಲು ಸೂಚನೆ ನೀಡಿದ್ದರು.
    ಎಫ್ಎಸ್ಎಲ್ ತಂಡವೇ ಬಂದು ಸಾಕ್ಷ್ಯ ಕಲೆ ಹಾಕಿದ್ದು ಕಲೆ ಹಾಕಿತ್ತು.
    ಪ್ರದೀಪ್ ಕುಟುಂಬದ ಜೊತೆಗೆ ಎರಡು ದಿನಗಳ ಹಿಂದೆ ನೆಟ್ಟಿಗೆರೆಯಲ್ಲಿರುವ ವೂಡ್ಸ್ ರೆಸಾರ್ಟ್ ಗೆ ಹೊಸ ವರ್ಷಾಚರಣೆಗಾಗಿ ಬಂದಿದ್ದು‌ ಡಿ.31ರ ರಾತ್ರಿ ಪತ್ನಿ ಜೊತೆಗೆ ಜಗಳ ಮಾಡಿಕೊಂಡು ವಾಪಸ್ಸು ಮನೆಗೆ ಹೊರಟು ಮರು ದಿನ ರೆಸಾರ್ಟ್ ಬಳಿ ಬಂದಿದ್ದ.
    ಸಂಜೆ 5 ಗಂಟೆ ಸುಮಾರಿಗೆ ಪತ್ನಿ ಮುಂದೆ ಮುಂದೆ ಕಾರಿನಲ್ಲಿ ಸಾಗುತ್ತಿದ್ದಾಗ ಹಿಂದೆ ಇದ್ದ ಕಾರಿನಲ್ಲಿ ಪ್ರದೀಪ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಶಬ್ದ ಕೇಳಿ ವಾಪಸ್ಸು ಬಂದ ಪತ್ನಿಗೆ ಘೋರ ದೃಶ್ಯ ಕಂಡಿದೆ.
    ಸಾವನ್ನಪ್ಪಿದ್ದ ಪ್ರದೀಪ್ ಸಾವಿಗೂ ಮುನ್ನ ಶಾಸಕ ಅರವಿಂದ ಲೊಂಬಾವಳಿ, ಗೋಪಿ.ಕೆ, ಸೋಮಯ್ಯ, ಜಿ.ರಮೇಶ್ ರೆಡ್ಡಿ, ಜಯರಾಮ್ ರೆಡ್ಡಿ, ರಾಘವ್ ಭಟ್ ಹೆಸರುಗಳನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಎಂಟು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾನೆ.
    ಹೆಚ್ ಎಸ್ ಆರ್ ಲೇಔಟ್ ಸಮೀಪದ ಹರಳೂರಿನಲ್ಲಿ ಕ್ಲಬ್ ತೆರೆಯುವ ಉದ್ದೇಶಕ್ಕೆ ಕೆ. ಗೋಪಿ ಮತ್ತು ಸೋಮಯ್ಯ ಬಳಿ 2018 ರಲ್ಲಿ ಚರ್ಚಿಸಿ ರೆಸಾರ್ಟ್ ನಡೆಸಲು ಇವರಿಬ್ಬರು ಒಪ್ಪಿಕೊಂಡು ಪ್ರತಿ ತಿಂಗಳು 3 ಲಕ್ಷ ರೂ. ಲಾಭಾಂಶ ಮತ್ತು ಅಲ್ಲಿಯೇ ಕೆಲಸ ಮಾಡಿದರೆ ತಿಂಗಳಿಗೆ ಒಂದೂವರೆ ಲಕ್ಷ ರೂ ಸಂಬಳ ಕೊಡುವುದಾಗಿ ಹೇಳಿದ್ದರು. ಅದಕ್ಕೆ ಒಪ್ಪಿಕೊಂಡು 2018 ರ ಮೇ ಯಿಂದ ಡಿಸೆಂಬರ್ ವರೆಗೆ ಒಂದು ಕೋಟಿ ಹತ್ತು ಲಕ್ಷ ರೂ ಬ್ಯಾಂಕ್‌ಗೆ ಜಮೆ ಮಾಡಿದ್ದೇನೆ.
    ಮೈಸೂರಿನಲ್ಲಿ ಇರುವ ಮನೆ ಮಾರಾಟ ಮಾಡಿ 40 ಲಕ್ಷ ರೂಪಾಯಿ ನಗದು ರೂಪದಲ್ಲಿ ಈ ಇಬ್ಬರಿಗೆ ನೀಡಿದ್ದೆ. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು.
    ಆದರೆ,ಇಲ್ಲಿಯವರೆಗೂ ಯಾವುದೇ ಲಾಭ ಕೊಡಲಿಲ್ಲ. ಈ ಬಗ್ಗೆ ಮಾತನಾಡಲು ಶಾಸಕರ ಬಳಿಗೆ ಹೋದಾಗ ರಾಜಿ ಸಂಧಾನ ನೆಪದಲ್ಲಿ ತಿಂಗಳಿಗೆ 1 ಲಕ್ಷ ರೂಪಾಯಿ ಲೆಕ್ಕದಲ್ಲಿ 9 ತಿಂಗಳು ನನ್ನ ಬಳಿ ಹಣ ಪಡೆದರು. ಆನಂತರ 90 ಲಕ್ಷ ರೂ. ವಾಪಸ್ ಕೊಡುತ್ತಾರೆ ಎಂದು ಹೇಳಿದರು.
    ಆದರೆ, ಆ ವೇಳೆಗೆ ನಾನು ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಶಾಸಕ ಲಿಂಬಾವಳಿ ಸಹ ನನಗೆ ಸಹಾಯ ಮಾಡಿಲ್ಲ. ರಮೇಶ್ ರೆಡ್ಡಿ ಬಳಿ 10 ಲಕ್ಷ ರೂ.ಸಾಲ ಪಡೆದಿದ್ದೆ. ಅದರ ಪ್ರತಿಯಾಗಿ ಕೃಷಿ ಜಮೀನು ಮಾರಾಟ ಮಾಡಿ 35 ಲಕ್ಷ ರೂ. ಪಾವತಿ ಮಾಡಿದ್ದೇನೆ. ಆದರೂ ಮತ್ತಷ್ಟು ಹಣ ಸುಲಿಗೆಗೆ ಬೆದರಿಕೆ ಒಡ್ಡುತ್ತಿದ್ದಾರೆ.
    ರಾಘವ ಭಟ್ ನನ್ನ ಬಳಿ 20 ಲಕ್ಷ ರೂ. ಸಾಲ ಪಡೆದಿದ್ದು, ಇಲ್ಲಿಯವರೆಗೂ ವಾಪಸ್ ಕೊಡದೆ ಮೋಸ ಮಾಡಿದ್ದಾರೆ. ನನಗೆ 2 ಕೋಟಿ 20 ಲಕ್ಷ ಬರಬೇಕಿತ್ತು. ಶಾಸಕರು ರಾಜಿ ಸಂಧಾನ ಮಾಡಿಸಿ 90 ಲಕ್ಷ ರೂ. ಕೊಡಿಸುವುದಾಗಿ ಹೇಳಿ 10 ಲಕ್ಷದ 9 ಚೆಕ್ ಕೊಡಿಸಿದ್ದರು.
    ಪ್ರತಿ ತಿಂಗಳು ಅಕೌಂಟ್ ಗೆ ಜಮೆ ಮಾಡಿಸಿಕೊಳ್ಳುವಂತೆ ಹೇಳಿದ್ದು, ಡೆತ್‌ನೋಟ್ ನಲ್ಲಿನ ಪ್ರಕಾರ 2 ಕೋಟಿ 20 ಲಕ್ಷ ಬರಬೇಕಿದೆ. ಕ್ಲಬ್ ಪ್ರಾರಂಭಿಸಲು ಮಾಡಿಕೊಂಡಿದ್ದ ಸಾಲ ಅದಕ್ಕೆ ಬಡ್ಡಿ ಹಣ ಕಟ್ಟಲು ಪತ್ನಿ ಸಹ ಸಾಲ ಮಾಡಿಕೊಟ್ಟಿದ್ದಾರೆ. ಈ ಎಲ್ಲ ಹಣವೂ ಪತ್ನಿ ಮತ್ತು ಮಗಳಿಗೆ ಕೊಡಿಸಬೇಕು ಎಂದು ಉಲ್ಲೇಖಿಸಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಸಾಲಕ್ಕೆ ಬಡ್ಡಿ ಹಣ ಕಟ್ಟಲು ಪತ್ನಿ ಸಹ ಸಾಲ ಮಾಡಿಕೊಟ್ಟಿದ್ದಾರೆ. ಈ ಎಲ್ಲ ಹಣವೂ ಪತ್ನಿ ಮತ್ತು ಮಗಳಿಗೆ ಕೊಡಿಸಬೇಕು ಎಂದು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
    ಇನ್ನು ಘಟನೆ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಷ್ಟೆ ಅಲ್ಲದೆ ಪ್ರದೀಪ್‌ ಮತ್ತು ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಕೂಡ ಇದ್ದು, ಪ್ರಕರಣ  ಬೆಳ್ಳಂದೂರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರದೀಪ್ ಸಾವಿನ ಕೇಸ್ ನಲ್ಲಿ ಪ್ರಭಾವಿಗಳ ಪಾತ್ರ ಏನು ಎನ್ನುವುದರ ಪತ್ತೆ ಹಚ್ಚಬೇಕಾಗಿದೆ.

    ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ ಫ್ಲೈ ಒವರ್ ವಿಸ್ತರಣೆ ಕಾಮಗಾರಿಗೆ ಚಾಲನೆ
    Next Article ಮರೆಯಾದ ದಿವ್ಯಜ್ಯೋತಿ ಸಿದ್ದೇಶ್ವರ ಸ್ವಾಮೀಜಿ
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಮ್ಯಾನೇಜರ್ ಅರೆಸ್ಟ್ !

    ಜೂನ್ 6, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir
    • Trentdam ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • AlfonsoFlolf ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe